Recent Posts

Monday, January 27, 2025
ಸುದ್ದಿ

2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಪ್ರಶಸ್ತಿಗೆ ಭಾಜನರಾದ ಮಂಜುನಾಥ ಭಟ್ ಇವರಿಗೆ ಅಭಿನಂದನಾ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಪ್ರಶಸ್ತಿಗೆ ಭಾಜನರಾದ ಶ್ರೀ “ಮಂಜುನಾಥ ಭಟ್” ಇವರಿಗೆ “ಅಭಿನಂದನಾ ಕಾರ್ಯಕ್ರಮ” ಇಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಇದರ ವತಿಯಿಂದ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್‌ ಸದಸ್ಯರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕೃಷಿ ಅರ್ಥಶಾಸ್ತ್ರಜ್ಞರು, ಅಭಿವೃದ್ಧಿ ಸಮಿತಿಯ ಸಂಚಾಲಕರಾದ ಡಾ. ಎನ್. ಎಸ್. ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರಾದ ಮಾರುತಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ವರ್ಗೀಸ್ ಪಿ ಹಾಗೂ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಉಪನ್ಯಾಸಕರು, ಮುಖ್ಯಶಿಕ್ಷಕರು, ಅಧ್ಯಾಪಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.