ಬಾಂಗ್ಲಾದೇಶದಲ್ಲಿನ ಹಿಂದುಗಳ ರಕ್ಷಣೆ ಸಮಿತಿ ರಚಿಸಿದ ಮೋದಿ ಸರಕಾರ! – ಕಹಳೆ ನ್ಯೂಸ್
ಡಿಜಿಟಲ್ ಡೆಸ್ಕ್; ಬಾಂಗ್ಲಾದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳು ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ. 'ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ...