ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತ – ಕಹಳೆ ನ್ಯೂಸ್
T20 World Cup 2024 Final :ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ 7 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಿತು. ಇದೇ ಮೊದಲ ಬಾರಿಗೆ ಐಸಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡವು ಬಲಿಷ್ಠ ಭಾರತದೆದುರು ಕೊನೆಯ ಎಸೆತದವರೆಗೂ...