ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗೆ ವಿಷಪ್ರಾಶನ ? ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ..!! – ಕಹಳೆ ನ್ಯೂಸ್
ಕರಾಚಿ, ಡಿ 18 : ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ವಿಷಪ್ರಾಶಾನದ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ . ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಇರಿಸಲಾಗಿದ್ದು, ಈಡೀ ಮಹಡಿಯಲ್ಲಿರುವ ಆತ ಚಿಕಿತ್ಸೆ ಪಡೆಯುತ್ತಿರುವ ಏಕೈಕ ರೋಗಿಯಾಗಿದ್ದಾನೆ. ಉನ್ನತ ಆಸ್ಪತ್ರೆ ಅಧಿಕಾರಿಗಳು ಮತ್ತು ಅವರ ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ...