ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ : ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆ : ಸೇಸಪ್ಪ – ಕಹಳೆ ನ್ಯೂಸ್
ಪುತ್ತೂರು: ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮರ್ಥ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು...