ವಿಶ್ವ ದಾಖಲೆ ನಿರ್ಮಾಣಕ್ಕೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮಾಗೆ ಬೇಕು ಕೇವಲ 9ರನ್-ಕಹಳೆ ನ್ಯೂಸ್
ಕಟಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದರ ಸನಿಹದಲ್ಲಿದ್ದಾರೆ. ಹೌದು.. ಇಂದು ಕಟಕ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವ ದಾಖಲೆ ನಿರ್ಮಾಣ ಮಾಡುವ ಸನ್ನಾಹದಲ್ಲಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ಇಂದು ನಡೆಯಲಿರುವ ಅಂತಿಮ...