ಟೀಂ ಇಂಡಿಯಾದ ಕೋಚಿಂಗ್ ಸಿಬ್ಬಂದಿಯನ್ನು ಹೊಸದಾಗಿ ಆಯ್ಕೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿ – ಕಹಳೆ ನ್ಯೂಸ್
ನವದೆಹಲಿ: ತಂಡದ ಕೋಚಿಂಗ್ ಸಿಬ್ಬಂದಿಯನ್ನು ಹೊಸದಾಗಿ ಆಯ್ಕೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದ್ದು, ಮಂಗಳವಾರ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸೋತು ತವರಿಗೆ ವಾಪಸಾಗಿರುವ ಭಾರತ ಕ್ರಿಕೆಟ್ ತಂಡದಲ್ಲಿ ಕೆಲ ಬದಲಾವಣೆಗಳಾಗುವುದು ಖಚಿತವಾಗಿದೆ. ಭಾರತ ತಂಡದ ಕೋಚ್ ಆಗುವವರು ಕನಿಷ್ಠ 2 ವರ್ಷ ಅಂತಾರಾಷ್ಟ್ರೀಯ ತಂಡದ ಕೋಚ್ ಆಗಿದ್ದ ಅನುಭವವಿರಬೇಕು ಹಾಗೂ 60 ವರ್ಷಕ್ಕಿಂತ ಕೆಳಪಟ್ಟವರಾಗಿರಬೇಕು ಎಂದು ಬಿಸಿಸಿಐ ಷರತ್ತು ವಿಧಿಸಿದೆ....