ನಾಲ್ಕನೇ ಏಕದಿನ ಪಂದ್ಯ: ಭಾರತಕ್ಕೆ ಹೀನಾಯ ಸೋಲು – ಕಹಳೆ ನ್ಯೂಸ್
ಹ್ಯಾಮಿಲ್ಟನ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲುಂಡಿದೆ. ನ್ಯೂಜಿಲ್ಯಾಂಡ್ 8 ವಿಕೆಟ್ ಗಳಿಂದ ಭಾರತವನ್ನು ಸೋಲಿಸಿದೆ. ಮೊದಲು ಬ್ಯಾಟಿಂಗ್ ಗಿಳಿದ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಬೌಲರ್ ಗಳ ಅಬ್ಬರಕ್ಕೆ ಪೆವಿಲಿಯನ್ ಪರೇಡ್ ಮಾಡಿತು. ಟೀಂ ಇಂಡಿಯಾವನ್ನು 92 ರನ್ ಗಳಿಗೆ ಕಟ್ಟಿಹಾಕುವಲ್ಲಿ ನ್ಯೂಜಿಲ್ಯಾಂಡ್ ಯಶಸ್ವಿಯಾಯ್ತು. ಗುರಿ ಬೆನ್ನು ಹತ್ತಿದ ನ್ಯೂಜಿಲ್ಯಾಂಡ್ 14.4 ಓವರ್ ಗಳಿಗೆ 2 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. ನ್ಯೂಜಿಲ್ಯಾಂಡ್ ವಿರುದ್ಧ...