ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿದ ಕೆಎಲ್ ರಾಹುಲ್
ಮೊಹಾಲಿ: ಕನ್ನಡಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ. ಇಂದು ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 14 ಎಸೆತದಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಪಂದ್ಯದ ಮೊದಲ ಓವರ್ ನಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿದ ರಾಹುಲ್ ಒಟ್ಟು 51 ರನ್(16 ಎಸೆತ, 6...