ಬೆಳ್ಳಂ ಬೆಳಗ್ಗೆ ಕರ್ತವ್ಯದಲ್ಲಿದ್ದ ವಿಟ್ಲ ಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..! – ಕಹಳೆ ನ್ಯೂಸ್
ವಿಟ್ಲ: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದೆ. ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ಐ ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ...