ಪುಲ್ವಾಮಾದಲ್ಲಿ ಬಿಜೆಪಿ ಮುಖಂಡ, ಪುರಸಭೆ ಸದಸ್ಯನನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು- ಕಹಳೆ ನ್ಯೂಸ್
ಜಮ್ಮು-ಕಾಶ್ಮೀರ:ಬಿಜೆಪಿ ಮುಖಂಡ, ಪುರಸಭೆ ಸದಸ್ಯನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ(ಜೂನ್ 02) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಾಕೇಶ್ ಪಂಡಿತ್ ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿನ ಸ್ನೇಹಿತನ ಮನೆಯಲ್ಲಿದ್ದಾಗ ಮೂವರು ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಗುಂಡು ತಗುಲಿದ್ದ ರಾಕೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಅಸೀಫಾ ಮುಸ್ತಖ್ ಎಂದು ಗುರುತಿಸಲಾಗಿದ್ದು, ಆಕೆಯನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು,...