6 ದಿನಗಳ ಹಿಂದೆ ಕಾಣೆಯಾಗಿದ್ದ ಸರಕಾರಿ ಅಧಿಕಾರಿ ಪಟ್ರಮೆ ನದಿಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್
ಬಂಟ್ವಾಳ: ಕಳೆದ ಆರು ದಿನಗಳ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಮಾ.27. ರಂದು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿದ್ದ ಇವರು ಮಾ.27 ರಂದು ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದವರು ಪೋನ್...