ಮತದಾರರ ಗುರುತಿನ ಚೀಟಿ ಅನಧಿಕೃತ ವಿತರಣೆ ಆರೋಪ : ಪುತ್ತೂರಿನ ಪ್ರತಿಷ್ಠಿತ ಜನಸೇವಾ ಕೇಂದ್ರದ ಮೇಲೆ ಸಹಾಯಕ ಆಯುಕ್ತ ಗಿರೀಶ್ ನಂದನ್ ನೇತೃತ್ವದಲ್ಲಿ ದಾಳಿ – ಕಹಳೆ ನ್ಯೂಸ್
ಪುತ್ತೂರು: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ಸೋಮವಾರ ಮುಸ್ಸಂಜೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದ ಮೇಲೆ ದಾಳಿ ಮಾಡಿದೆ. ತಹಸೀಲ್ದಾರ್ ನಿಸರ್ಗ ಪ್ರಿಯ ಮತ್ತು ತಾಲೂಕು...