Tuesday, January 21, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಹಂತಕ ರಿಯಾಜ್‌ ಅಂಕತಡ್ಕ ಕರಾಳ ಮುಖ – ಉಳಿದ ಇಬ್ಬರು ಹಂತಕರಿಗೆ ಈತನೇ ಮಾರ್ಗದರ್ಶಿ..!ರಿಯಾಜ್ ಖಾತೆಗೆ ಲಕ್ಷಾಂತರ ರೂಪಾಯಿ ಹಣ ಜಮೆ – ಕಹಳೆ ನ್ಯೂಸ್

ಪುತ್ತೂರು, ಆ 12 : ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕಾರಣದ ಆರೋಪಿಗಳ ಪೈಕಿ ಪ್ರಮುಖ ಆರೋಪಿ ರಿಯಾಜ್‌ ಅಂಕತಡ್ಕ ನಿವಾಸಿಯಾಗಿದ್ದು, ಇದು ಪ್ರವೀಣ್‌ ಮನೆಯಿಂದ 3 ಕಿ.ಮೀ. ದೂರದಲ್ಲಿದ್ದು, ಕೃತ್ಯ ನಡೆದ ದಿನ ಉಳಿದ ಇಬ್ಬರು ಹಂತಕರಿಗೆ ಈತನೇ ಮಾರ್ಗದರ್ಶಿ ಆಗಿದ್ದನೆಂಬುದು ತಿಳಿದು ಬಂದಿದೆ. ಹಿಂದೂ ಯುವತಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಆಕೆಯನ್ನು ಕೇರಳದ ಕಣ್ಣೂರಿಗೆ ಕರೆದೊಯ್ದು ಮತಾಂತರ ಮಾಡಲು ಯತ್ನ : ರಿಯಾಜ್‌ನ ಸಂಬಂಧಿಯೊಬ್ಬ ಕೆಲವು ವರ್ಷಗಳ ಹಿಂದೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬಂಧಿತ ಮೂವರು ಜಿಹಾದಿ ಹಂತಕರಿಗೆ 5 ದಿನ ಪೊಲೀಸ್ ಕಸ್ಟಡಿ – ಕಹಳೆ ನ್ಯೂಸ್

ಸುಳ್ಯ, ಆ 11 : ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳನ್ನು ಗುರುವಾರದಂದು ಬಂಧಿಸಲಾಗಿದ್ದು, ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಮೂರು ಮಂದಿ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಗಿತ್ತು. ಕೋರ್ಟ್ ನಲ್ಲಿ ಪೊಲೀಸರ ಮನವಿ ಹಿನ್ನೆಲೆಯಲ್ಲಿ ಆ.16ರವರೆಗೆ ಆರೋಪಿಗಳಿಗೆ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.ಇಂದು ಬಂಧಿಸಲಾದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಝ್ ಅಂಕತಡ್ಕ‌ (27),...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಪ್ರಮುಖ ಮೂರು ಆರೋಪಿಗಳು ಅಂದರ್..!? – ಕೊನೆಗೂ ಜಿಹಾದಿಗಳ ಹೆಡೆಮುಕಟ್ಟಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು, ಆ 11 : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಈಗಾಗಲೇ ಏಳು ಮಂದಿಯ ಬಂಧನವಾಗಿದೆ. ಪ್ರಕರಣ ಸಂಬಂಧಿಸಿ ಇನ್ನೂ ಮೂವರು ಆರೋಪಿಗಳ ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ತಿಳಿದಿದ್ದರು. ಇಂದು ಆ ಮೂರು ಆರೋಪಗಳನ್ನು ಹೆಡೆಮುಕಟ್ಟುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಪೋಲೀಸ್ ಮೂಲಗಳಿಂದ ಅಭಿಸಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಎಡಿಜಿಪಿ, ಮೂವರು ಆರೋಪಿಗಳ ಮನೆ, ವಿಳಾಸ, ಫೋಟೋ ಸೇರಿದಂತೆ ಮಾಹಿತಿಗಳು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ನೇರ ಭಾಗಿಯಾಗಿದ್ದ ಮೂವರ ಗುರುತು ಪತ್ತೆ – ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ; ಬಂಧಿತ ಆರೋಪಿಗಳಿಗೆ ಪಿಎಫ್‌ಐ ಜತೆ ಲಿಂಕ್ ಬಗ್ಗೆ ಶಂಕೆ – ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ – ಕಹಳೆ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಿಗೆ ಜೀವ ಬೆದರಿಕೆ, ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿ ಜಿಹಾದಿಗಳಿಂದ ಹತ್ಯೆಗೆ ಯತ್ನ ; ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್…! – ಕಹಳೆ ನ್ಯೂಸ್

ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್ (Vishwa Hindu Parishad – VHP) ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 506, 507ರ ಅನ್ವಯ ಎಫ್​ಐಆರ್ ದಾಖಲಾಗಿದೆ. ಮಂಗಳೂರಿನ ಬಜ್ಜೋಡಿ-ಬಿಕರ್ನಕಟ್ಟೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಸುಳ್ಯ SDPI ಕಚೇರಿಯಲ್ಲಿ ಮಹಜರು ; ಬಂಧಿತ ನೌಫಾಲ್, ಆಬಿದ್ ಗೆ ಆಗಸ್ಟ್ 12 ರವರೆಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಸುಳ್ಯ, ಆ 09 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ನಿನ್ನೆ ಇಬ್ಬರನ್ನು ಬಂಧಿಸಿದ್ದು ಸುಳ್ಯ ಎಸ್ ಡಿಪಿಐ ಕಚೇರಿಗೆ ಕರೆದುಕೊಂಡು ಬಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಕಚೇರಿಗೆ ಇಂದು ಬೆಳಿಗ್ಗೆ ಕರೆದುಕೊಂಡು ಹೋಗಿ ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದರು. ಬೆಳಿಗ್ಗೆ 8 ಗಂಟೆ ಸುಮಾರಿಗೆ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿನಿತ್ಯದ ದಾರಿ ಬಿಟ್ಟು ಬೇರೆ ದಾರಿ ಹಿಡಿದಿದ್ದ.! ಪುತ್ತೂರು ಬೊಳುವಾರು ಅಪಾರ್ಟ್ಮೆಂಟ್ ನಿಂದ ಬಿದ್ದು ಸುಶಾನ್‌ ಸಾವು ; ಸುದಾನ ಪ್ರೌಢಶಾಲೆಯ ವಿದ್ಯಾರ್ಥಿ ಸಾವಿನ ಬಗ್ಗೆ ಸಮಗ್ರ ತನಿಖೆಗೆ ತಂದೆಯಿಂದ ದೂರು – ಕಹಳೆ ನ್ಯೂಸ್

ಪುತ್ತೂರು, ಆ 08 : ಬೊಳುವಾರು ಅಪಾರ್ಟ್ಮೆಂಟ್ ಕಟ್ಟಡದ ಮಹಡಿಯಿಂದ ಬಿದ್ದು ಮೃತಪಟ್ಟ ವಿದ್ಯಾರ್ಥಿ ಸುಶಾನ್‌ ರೈ ಅವರ ಅಂತ್ಯಕ್ರಿಯೆ ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಆ. 6ರ ಸಂಜೆ ನಡೆಯಿತು. ಸುದಾನ ವಸತಿಯುತ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್‌ ರೈ ಸಾವಿನ ಬಗ್ಗೆಸಮಗ್ರ ತನಿಖೆ ನಡೆಸುವಂತೆ ತಂದೆ ಮನೋಹರ್‌ ರೈ ಪೊಲೀಸರಿಗೆ ದೂರು ನೀಡಿದ್ದಾರೆ.ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್‌ ರೈ ಆ. 5ರ ಸಂಜೆ ಬೊಳುವಾರು...
ಕ್ರೈಮ್ಪುತ್ತೂರುರಾಜ್ಯಸುದ್ದಿಸುಳ್ಯ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಮತ್ತಿಬ್ಬರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಸುಳ್ಯದ ನಾವೂರು ನಿವಾಸಿ ಅಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್ (28) ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ....
1 80 81 82 83 84 111
Page 82 of 111