Wednesday, January 22, 2025

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಬಗ್ಗೆ ಇರಲಿ ಎಚ್ಚರ ; ಮಂಗಳೂರಿನಲ್ಲೂ ಸೈಬರ್ ವಂಚನೆ ಬೆಳಕಿಗೆ, ಮಂಗಳೂರಿನ ಸೈಬರ್ ತಜ್ಞ ಡಾ. ಅನಂತ ಪ್ರಭು.ಜಿ ಹೇಳಿದ್ದೇನು‌..!? – ಕಹಳೆ ನ್ಯೂಸ್

ಮಂಗಳೂರು: ದೇಶಾದ್ಯಂತ ಕಾಶ್ಮೀರ್ ಫೈಲ್ಸ್ ಚಿತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿದ ಸೈಬರ್ ವಂಚಕರು ಜನರನ್ನು ಲೂಟಿ ಮಾಡಲು ಹೊರಟಿರುವುದು ಬೆಳಕಿಗೆ ಬಂದಿದೆ. ಚಿತ್ರವನ್ನು ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್‌ಗೆ ಲಿಂಕ್ ಕಳುಹಿಸಿ ವಂಚನೆ ಮಾಡುತ್ತಿರುವ ಬಗ್ಗೆ ಸೈಬರ್ ತಜ್ಞರು ಎಚ್ಚರಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ಡೌನ್‌ಲೋಡ್ ಮಾಡಬಹುದೆಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹರಿದಾಡುತ್ತಿದೆ. ಒಂದು ವೇಳೆ ಸುಲಭ, ಉಚಿತವಾಗಿ ಸಿನಿಮಾ ನೋಡುವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ ; ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಕ್ರಮಕೈಗೊಳ್ಳಿ ಎಂದು ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನೆಲಮಂಗಲದಲ್ಲಿ ಅವೇರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲೇ ಭಗವದ್ಗೀತೆಯಲ್ಲಿ ಬರುವ ಎಲ್ಲಾ ವಿಚಾರವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹೀಗಾಗಿ ಗುಜರಾತ್ ರಾಜ್ಯದಲ್ಲಿ ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಲು ಜಾರಿಗೆ ತಂದಿದ್ದಾರೆ. ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಅವರ ಜೊತೆ ತೀರ್ಮಾನ ಮಾಡಿ ಕರ್ನಾಟಕದಲ್ಲೂ ಭಗವದ್ಗೀತೆಯನ್ನು ಪಠ್ಯ ಪುಸ್ತಕ ಸೇರಿಸಲು...
ಮಾಹಿತಿರಾಜ್ಯಸುದ್ದಿ

ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21...
ಬೆಂಗಳೂರುರಾಜ್ಯಸಿನಿಮಾಸುದ್ದಿ

” ರೇಪ್ ಮಾಡಿ ನನ್ನ ಸ್ನೇಹಿತನ ಪತ್ನಿಯನ್ನೇ ತುಂಡು ತುಂಡು ಕತ್ತರಿಸಿ ರಸ್ತೆಗೆ ಎಸೆದಿದ್ರು – ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಡೆಮೋ ತೋರಿಸಿದೆ, ಕಾಶ್ಮೀರಿ ಪಂಡಿತರ ಮೇಲಾಗಿದ್ದ ದೌರ್ಜನ್ಯ ಊಹೆಗೂ ಮೀರಿದಷ್ಟು ಕ್ರೂರ ” ಕಾಶ್ಮೀರದ ಕರಾಳ ಕಥೆಯನ್ನು ಬಿಚ್ಚಿಟ್ಟ ಬೆಲಾ ಝೂಷಿ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾದ ಸಿನಿಮಾ ದಿ ಕಾಶ್ಮೀರ್ ಫೈಲ್ಸ್ ಕಾಶ್ಮೀರದಿಂದ ದಕ್ಷಿಣಕ್ಕೆ ಮಹಾ ವಲಸೆ ಬಂದ ಕಾಶ್ಮೀರಿ ಪಂಡಿತರ ಕಥೆ ಹೇಳುತ್ತದೆ. ಸಿನಿಮಾದಲ್ಲಿರುವ ಕಥೆ ಪ್ರತಿಯೊಬ್ಬರ ರಕ್ತ ಕುದಿಯುವಂತೆ ಮಾಡುತ್ತದೆ. ಇದೀಗ ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಜೀವನದಲ್ಲಿ ನಡೆದ ಕರಾಳ ಘಟನೆ ಹಾಗೂ ನೆನಪನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆ ಬೆಲಾ ಝೂಷಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಡೆಮೋ ತೋರಿಸಿದೆ. ಕಾಶ್ಮೀರಿ...
ಬೆಂಗಳೂರುರಾಜ್ಯಸುದ್ದಿ

ಹಿಟ್ ಅಂಡ್ ರನ್ ಅಪಘಾತ ಪ್ರಕರಣಗಳ ಪರಿಹಾರ ಮೊತ್ತ ಏ.1 ರಿಂದ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ‘ಹಿಟ್ & ರನ್’ ಅಪಘಾತ ಪ್ರಕರಣಗಳ (ಸಿ-ರಿಪೋರ್ಟ್) ಗಾಯಗೊಂಡವರು ಅಥವಾ ಮೃತರ ಕುಟುಂಬ ಸಂತ್ರಸ್ತರಿಗೆ ದೊಡ್ಡ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ಪರಿಹಾರ ದರಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ಫೆಬ್ರವರಿ 2022 ರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ(MoRTH) ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ, ರಾಜ್ಯ ಸರ್ಕಾರವು ಸಂತ್ರಸ್ತರಿಗೆ ನೀಡುವ ಪರಿಹಾರವನ್ನು ಹೆಚ್ಚಿಸಿದೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್...
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಳ್ಳಂಬೆಳಿಗ್ಗೆ ಮಂಗಳೂರಿನ ಮೆಸ್ಕಾಂ ಹಿರಿಯ ಅಧಿಕಾರಿ ಸೇರಿ ರಾಜ್ಯದ 18 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ-ಕಹಳೆ ನ್ಯೂಸ್

ಮಂಗಳೂರು: ಹಿರಿಯ ಮೆಸ್ಕಾಂ ಅಧಿಕಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮನೆ ಹಾಗೂ ಕಚೇರಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಎ.ಸಿ.ಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ದಯಾ ಸುಂದರ್ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಮಂಗಳೂರಿನ ಕದ್ರಿ ಕಂಬಳದಲ್ಲಿ ಸ್ವಂತ ಫ್ಲ್ಯಾಟ್ ಹೊಂದಿದ್ದಾರೆ. ಅದನ್ನು ಬಾಡಿಗೆಗೆ ನೀಡಿರುವ ಅವರು ಬೇರೊಂದು ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ವಾಸಿಸುತ್ತಿದ್ದರು. ಮಲ್ಲಿಕಟ್ಟೆಯ ವಿಜಯಾ ಅಪಾರ್ಟ್ ಮೆಂಟ್ ಬಳಿಯ...
ಕೊಡಗುದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಫಲ | ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ – ಹೆದ್ದಾರಿ ಸಚಿವರ ಸಭೆಯಲ್ಲಿ ನಿರ್ಧಾರ ; ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆದೇಶ – ಕಹಳೆ ನ್ಯೂಸ್

ನವದೆಹಲಿ, ಮಾ. 16 : ಸಾಕಷ್ಟು ಹೋರಾಟಗಳು ಪ್ರತಿಭಟನೆಯ ಬಳಿಕ ಇದೀಗ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಗೊಳಿಸಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.   ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಶೀಘ್ರದಲ್ಲೇ ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು, ಮಾ 15 : ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) 'ನಂದಿನಿ' ಹಾಲಿನ ದರ ಹೆಚ್ಚಳ ಮಾಡುವ ಸಿದ್ಧತೆ ನಡೆಸಿದ್ದು, ಈ ತಿಂಗಳ ಅಂತ್ಯದೊಳಗೆ ಪ್ರತಿ ಲೀಟರ್ ಗೆ 3 ರೂ ದರ ಏರಿಸಿ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಹಾಮಂಡಳಿ ನಡೆಸಿದ ಈ ಹಿಂದಿನ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ ಸರ್ಕಾರಕ್ಕೆ ಮನವಿ ಮಾಡುವಂತೆ ಹಾಲು ಒಕ್ಕೂಟಗಳು ಒತ್ತಡ ಹೇರಿತ್ತು. ರಾಜ್ಯದ 14 ಹಾಲು...
1 118 119 120 121 122 166
Page 120 of 166