ಅಮೈ ಮಹಾಲಿಂಗ ನಾಯ್ಕರ ಮನೆಗೆ ಪೇಜಾವರ ಶ್ರೀ ದಿಢೀರ್ ಭೇಟಿ ; ” ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ, ಜಗತ್ತಿಗೇ ಸ್ಫೂರ್ತಿ ” ಪೇಜಾವರ ಶ್ರೀ – ಕಹಳೆ ನ್ಯೂಸ್
ಮಂಗಳೂರು : ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ ಗೌರವದಿಂದ ಬರಮಾಡಿಕೊಂಡರು . ನಾಯ್ಕರ ತೋಟಕ್ಕೆ ತೆರಳಿದ ಶ್ರೀಗಳು ಭಗೀರಥ ಯತ್ನದಿಂದ ಕೊರೆದ ಸುರಂಗದ ಒಳಹೊಕ್ಕು ವಿಸ್ಮಯಗೊಂಡರು . ಸುರಂಗ ಕೊರೆದು ಗಂಗೆಯನ್ನು ಪಡೆದ ಯಶೋಗಾಥೆಯನ್ನು ನಾಯ್ಕರಿಂದಲೇ...