ಅನೇಕ ಧಾರ್ಮಿಕ ಕ್ಷೇತ್ರದ ಹೊಣೆ ಹೊತ್ತು ಶ್ರಮಿಸಿದ, ಬ್ರಹ್ಮಕಲಶೋತ್ಸವದ ಅನ್ಯಾನ್ಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾಗಿ ನೇಮಕ – ಕಹಳೆ ನ್ಯೂಸ್
ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾಗಿ ಪುತ್ತೂರಿನ ಖ್ಯಾತ ವಕೀಲ ಮಹೇಶ್ ಕಜೆ ಅವರು ನೇಮಕಗೊಂಡಿದ್ದಾರೆ. ಸಮುದಾಯಕ್ಕೆ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಮಹೇಶ್ ಕಜೆಯವರನ್ನು 2022-23ರ ಅವಧಿಗೆ ಉಪಾಧ್ಯಕ್ಷರನ್ನಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹಾಸಭಾಧ್ಯಕ್ಷ ಅಶೋಕ ಹಾರನಕಳ್ಳಿ ನೇಮಕಗೊಳಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ‘ಕೇದಾರ’ ನಿವಾಸಿಯಾಗಿರುವ ಮಹೇಶ್ ಕಜೆಯವರು ಬೊಳುವಾರು ಕಜೆ ಲಾ ಛೇಂಬರ್ಸ್ನ ಮುಖ್ಯಸ್ಥರಾಗಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮಾಜಿ ಸದಸ್ಯರೂ, ಪುತ್ತೂರು...