Recent Posts

Tuesday, January 21, 2025

ರಾಜ್ಯ

ಉಡುಪಿಕೊಡಗುದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ..! ; ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು, ಡಿಸೆಂಬರ್ 01: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು : ಪುನರುಚ್ಚರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ಇರಲಿದೆ. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ...
ರಾಜ್ಯಸುದ್ದಿ

ಕಲ್ಪತರು ನಾಡಿನಲ್ಲಿ ಮತ್ತೆ ಕೋವಿಡ್-19 ಆತಂಕ ; ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ – ಕಹಳೆ ನ್ಯೂಸ್

ತುಮಕೂರು: ಕಲ್ಪತರು ನಾಡಿನಲ್ಲಿ ಮತ್ತೆ ಕೋವಿಡ್-19 ಆತಂಕ ಮತ್ತೆ ಹೆಚ್ಚಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ ಪಟ್ಟಿದೆ. ಈ ಸಂಬಂಧ ತುಮಕೂರು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ಹೇಳಿಕೆ ನೀಡಿದ್ದು, ತುಮಕೂರಿನ ಸಿದ್ದಗಂಗಾ ಹಾಗೂ ವಾದೀರಾಜ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲರೂ ಕೇರಳದಿಂದ ಬಂದ ವಿದ್ಯಾರ್ಥಿಗಳು. ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆ. 15 ವಿದ್ಯಾರ್ಥಿಗಳ ಸ್ವಾಬನ್ನು...
ರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಯಾವಾಗ ಕುಡಿತಾರೋ, ಯಾವಾಗ ಕುಡಿಯಲ್ಲೊ ಗೊತ್ತಿಲ್ಲ: ಕೆ.ಎಸ್.ಈಶ್ವರಪ್ಪ ವಾಗ್ದಾಳಿ – ಕಹಳೆ ನ್ಯೂಸ್

ಕಲಬುರಗಿ: ಸಿದ್ದರಾಮಯ್ಯ ಯಾವಾಗ ಕುಡಿತಾರೋ ಯಾವಾಗ ಕುಡಿಯಲ್ಲೋ ಗೊತ್ತೆ ಆಗಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವಾಗ ಕುಡಿತಾರೋ ಯಾವಾಗ ಕುಡಿಯಲ್ಲೊ ಗೊತ್ತಿಲ್ಲ. ಅವರು ಹೆಂಡಾ ಕುಡಿದಾಗ ಒಂದು ಮಾತನಾಡುತ್ತಾರೆ. ಹೆಂಡ ಕುಡಿಯದೇ ಇದ್ದಾಗ ಒಂದು ಮಾತನಾಡುತ್ತಾರೆ. ಸಿದ್ದರಾಮಯ್ಯ ಒಬ್ಬ ಮಹಾನ್ ಮೋಸಗಾರ ಸಿದ್ದರಾಮಯ್ಯರ ರಕ್ತದ ಕಣಕಣದಲ್ಲಿ ಮೋಸ...
ಉಡುಪಿರಾಜ್ಯಸುದ್ದಿ

ವಿದೇಶದಿಂದ ಬಂದವರಿಗೆ ಆರ್‌-ಟಿ-ಪಿಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ; ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ – ಕಹಳೆ ನ್ಯೂಸ್

ಉಡುಪಿ, ನ 30 : ವಿದೇಶದಿಂದ ಬಂದವರ ಕೋವಿಡ್ ಆರ್‌-ಟಿ-ಪಿಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ. ನ.20 ರ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ , ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕದ ಹಿನ್ನಲೆಯಲ್ಲಿ ವಿದೇಶದಿಂದ ಬಂದವರು ಮೇಲೆ ನಿಗಾ ವಹಿಸಲಾಗಿದೆ. ಆರ್‌-ಟಿ-ಪಿಆರ್‌ ನೆಗೆಟಿವ್ ವರದಿ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ; ‘ಸಾರ್ವಜನಿಕ ಕಾರ್ಯಕ್ರಮ ಸೇರಿ ಯಾವುದೇ ಚಟುವಟಿಕೆ ನಿರ್ಬಂಧಿಸುವ ಯಾವುದೇ ಪ್ರಸ್ತಾವನೆ ಇಲ್ಲ’ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ನ 30 : "ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ, ಕಾಲೇಜುಗಳು, ಸಾರ್ವಜನಿಕ ಕಾರ್ಯಕ್ರಮಗಳು ಸೇರಿದಂತೆ ಯಾವುದೇ ಚಟುವಟಿಕೆಯನ್ನು ನಿರ್ಬಂಧಿಸುವ ಪ್ರಸ್ತಾವ ಸದ್ಯಕ್ಕೆ ಇಲ್ಲ. ಕ್ರಿಸ್‌ಮಸ್‌, ಹೊಸ ವರ್ಷಾಚರಣೆ, ವಿಧಾನಮಂಡಲದ ಬೆಳಗಾವಿ ಅಧಿವೇಶನ ನಡೆಸುವ ವಿಷಯದಲ್ಲಿ ಬದಲಾವಣೆ ಕುರಿತಂತೆ ಡಬ್ಲ್ಯುಎಚ್‌ಓ ವರದಿ ಆಧಾರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ಮಂಗಳವಾರ ನಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬೊಮ್ಮಾಯಿಯವರು, " ಓಮೈಕ್ರಾನ್‌ ತಳಿಯು ಕಳವಳಕಾರಿ ರೂಪಾಂತರಿಯಾಗಿದ್ದು,...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಬಂದ್ ಮಾಡಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ – ಕಹಳೆ ನ್ಯೂಸ್

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಸ್ಪಷ್ಟಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿ, 'ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದರು....
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆ ; ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರಿಗೆ ಆರ್ ಟಿಪಿಸಿಆರ್ ಕಡ್ಡಾಯ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ನ. 29 : ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದ್ದು, ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೋಮವಾರದಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ತಲಪಾಡಿ ಸೇರಿದಂತೆ ಎಲ್ಲಾ ಗಡಿಗಳಲ್ಲಿ ತಪಾಸಣೆ ಆರಂಭಗೊಂಡಿದೆ. ಸೋಮವಾರದಿಂದ ಇತರ ಇಲಾಖೆಗಳ ಸಿಬ್ಬಂದಿಗಳನ್ನು...
1 130 131 132 133 134 166
Page 132 of 166