ಪುತ್ತೂರು ನಗರಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ರೂ. 9 ಕೋಟಿ ಪ್ರಸ್ತಾವನೆ ; ಶಾಸಕರು, ನಗರಸಭೆ, ಪೂಡಾ ಅಧ್ಯಕ್ಷರಿಂದ ಮುಖ್ಯಮಂತ್ರಿಗಳಿಗೆ ಮನವಿ – ಕಹಳೆ ನ್ಯೂಸ್
ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಸಂಪರ್ಕ ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ರೂ.೯ ಕೋಟಿಯ ಪ್ರಸ್ತಾವನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮತ್ತು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಪುತ್ತೂರು ನಗರಸಭೆ ಪಟ್ಟಣ ಪ್ರದೇಶದಲ್ಲಿ ವಾಹನ ಸಂಚಾರ ನಿಯಂತ್ರಣಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿ, ವಿಟ್ಲ, ಪುತ್ತೂರು,...