Saturday, November 23, 2024

ರಾಜ್ಯ

ರಾಜ್ಯ

ಮಂಗಳೂರು-ಶ್ರವಣಬೆಳಗೊಳ-ಬೆಂಗಳೂರು ರೈಲು ಮತ್ತೆ ಆರಂಭ- ಕಹಳೆ ನ್ಯೂಸ್

ಮಂಗಳೂರು : ಮಂಗಳೂರು-ಶ್ರವಣಬೆಳಗೊಳ-ಬೆಂಗಳೂರು ರೈಲು ಸೇವೆ ಪುನಃ ಆರಂಭವಾಗುತ್ತಿದೆ. ಕೋವಿಡ್ ಕಾರಣದಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಕರಾವಳಿ ಭಾಗದ ಪ್ರಯಾಣಿಕರಿಗೆ ತೊಂದರೆ ಉಂಟಾಗಿತ್ತು. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ. "ವಾರದಲ್ಲಿ ನಾಲ್ಕು ದಿನಗಳ ಕಾಲ ರೈಲು ಸಂಚಾರ ನಡೆಸಲಿದ್ದು, ಜನರು ಇದರ ಉಪಯೋಗ ಪಡೆದುಕೊಳ್ಳಬೇಕು" ಎಂದು ಮನವಿ ಮಾಡಿದ್ದಾರೆ. ಸಂಸದರು ಕೇಂದ್ರ ರೈಲ್ವೆ ಸಚಿವರು, ರೈಲ್ವೆ ಇಲಾಖೆಯ ಜೊತೆ ಮಾತುಕತೆ...
ರಾಜ್ಯಸುದ್ದಿ

ಲಾಕ್​ಅಪ್ ಡೆತ್ ತಡೆಗೆ ಸಿಸಿಟಿವಿ ಅಳವಡಿಸಿದ್ದನ್ನು ಖಾತರಿಪಡಿಸಿ – ಕೇಂದ್ರಕ್ಕೆ ಸುಪ್ರೀಂ ಸೂಚನೆ – ಕಹಳೆ ನ್ಯೂಸ್

ನವದೆಹಲಿ: ಎಲ್ಲ ವಿಚಾರಣಾ ಕೊಠಡಿಗಳು ಮತ್ತು ಲಾಕ್​ಅಪ್​ಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಆಡಿಯೋ ರೆಕಾರ್ಡರ್​ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಇದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನೀಡಿದ ಐತಿಹಾಸಿಕ ತೀರ್ಪು ಒಂದರಲ್ಲಿ ಸೂಚಿಸಿದೆ. ಸುಪ್ರೀಂ ಕೋರ್ಟ್​ನ ಈ ಆದೇಶವು ಪೊಲೀಸರಿಗಷ್ಟೇ ಅಲ್ಲ ಸಿಬಿಐ, ಇಡಿ, ಎನ್​ಐಎಗೂ ಅನ್ವಯವಾಗುತ್ತದೆ. ಲಾಕ್​ಅಪ್ ಡೆತ್ ಕೇಸ್​ಗಳು, ಚಿತ್ರಹಿಂಸೆ ಪ್ರಕರಣಗಳನ್ನು ತಡೆಯುವ ದೃಷ್ಟಿಯಿಂದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ 2018ರಲ್ಲೇ ಸುಪ್ರೀಂ ಕೋರ್ಟ್​...
ರಾಜ್ಯ

ಬಿಪಿಎಲ್ ಕಾರ್ಡ್‌ದಾರರಿಗೆ 3 ಲೀಟರ್ ಸೀಮೆಎಣ್ಣೆ ವಿತರಿಸಲು ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಬಳಿಕ ಎಲ್‌ಪಿಜಿ ಸಂಪರ್ಕ ಇಲ್ಲದಿದ್ದರೆ ಸೀಮೆಎಣ್ಣೆ ವಿತರಣೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೆಂಗಳೂರು ಮೂಲಕ ವಕೀಲ ಎಸ್. ಚಂದ್ರಶೇಖರಯ್ಯ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಸರ್ಕಾರಕ್ಕೆ ಈ ಕುರಿತು ನಿರ್ದೇಶನ ನೀಡಿದ್ದಾರೆ. 2016ರ ಜುಲೈನಲ್ಲಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಅನುಗುಣವಾಗಿ ಈ ನಿರ್ದೇಶ ಕೊಡಲಾಗಿದೆ. ಒಂದು...
ರಾಜ್ಯಸುದ್ದಿ

ದೇಶದಲ್ಲೇ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ರಾಜ್ಯ ಸಜ್ಜು – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಉದ್ದೇಶಿತ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕವೇ ಜಾರಿ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡುವ ಕುರಿತಂತೆ ನಿವೃತ್ತ ಮುಖ್ಯಕಾರ್ಯದರ್ಶಿ ಎಸ್.ವಿ.ರಂಗನಾಥ್ ನೀಡಿರುವ ವರದಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು. ಈ ವರದಿಯನ್ನು...
ರಾಜಕೀಯರಾಜ್ಯ

ಕುತೂಹಲ ಮೂಡಿಸಿದೆ ಸಿಎಂ ಬಿಎಸ್​ವೈ ನಡೆ! – ಕಹಳೆ ನ್ಯೂಸ್

ಕಳೆದ ಒಂದುವಾರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆ ಬಿಜೆಪಿ ಪಾಳಯದಲ್ಲಿ ಕುತೂಹಲ ಹುಟ್ಟಿಸಿದೆ. ನಿಗಮ ಮಂಡಳಿಗೆ ಸರಣಿ ನೇಮಕ ಮಾಡಿದ್ದ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಜತೆಗೆ ರಾಜ್ಯದ ಸಂಸದರ ಸಭೆಯನ್ನೂ ಕರೆದಿದ್ದಾರೆ. ಕಳೆದ ವಾರವಷ್ಟೇ ನಡೆದಿದ್ದ ಸಂಪುಟ ಸಭೆಯಲ್ಲಿ ನಾಲ್ಕಾರು ಪ್ರಮುಖ ವಿಷಯ ಹೊರತು ಹೆಚ್ಚಿನ ವಿಷಯಗಳು ಚರ್ಚೆಗೆ ಬಂದಿರಲಿಲ್ಲ. ಕೇವಲ 18 ನಿಮಿಷಯದಲ್ಲೇ ಸಂಪುಟ ಸಭೆ ಮುಗಿದಿತ್ತು. ಇದೀಗ ಪುನಃ ಸಂಪುಟ ಸಭೆ ಕರೆದಿರುವುದು ರಾಜಕೀಯ...
ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಧನ್ಯವಾದ ತಿಳಿಸಿದ ಬಿಜೆಪಿ! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದ ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ಡಿ.ಕೆ.ಶಿವಕುಮಾರ್ ಅವರೇ, ಅಕ್ರಮ ಆಸ್ತಿ ಸಂಪಾದಿಸಿದ್ದೇನೆ ಎಂದು ಒಪ್ಪಿಕೊಂಡಿರುವುದಕ್ಕಾಗಿ ಧನ್ಯವಾದಗಳು. ನೀವಿಷ್ಟು ಬಹಿರಂಗವಾಗಿಯೇ ತಪ್ಪನ್ನು ಒಪ್ಪಿಕೊಂಡ ಮೇಲೂ ತನಿಖಾ...
ರಾಜ್ಯಶಿಕ್ಷಣ

ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ಖಾಸಗಿ ಶಾಲೆಗಳು – ಕಹಳೆ ನ್ಯೂಸ್

ಬೆಂಗಳೂರು: ಶುಲ್ಕ ಪಾವತಿಸಿಲ್ಲ ಎಂಬುದಕ್ಕಾಗಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೂಚಿಸಿದ ಬೆನ್ನಲ್ಲೇ ಶುಲ್ಕ ಪಾವತಿಸದಿದ್ದರೆ “ಆನ್‌ಲೈನ್‌ ಕ್ಲಾಸ್‌ ಸ್ಥಗಿತಗೊಳಿಸುತ್ತೇವೆ’ ಎಂಬುದಾಗಿ ಖಾಸಗಿ ಶಾಲಾಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸಿಲ್ಲ ಎಂಬ ಕಾರಣ ಮುಂದಿಟ್ಟು ಮಕ್ಕಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಸೋಮವಾರವಷ್ಟೇ ಸಚಿವ ಸುರೇಶ್‌ ಕುಮಾರ್‌ ಸೂಚನೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌)ದ...
ರಾಜ್ಯ

‘ನಿವಾರ್’ ಚಂಡಮಾರುತ : ರಾಜ್ಯದ ಕೆಲವು ಕಡೆ ರೆಡ್ ಅಲರ್ಟ್ ಘೋಷಿಸಲಾಗಿದೆ :ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು : ಬೆಂಗಳೂರಿಗೂ ಇಂದು ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಚಂಡಮಾರುತ ಬಂದರೆ ನಾವು, ನೀವು ತಡೆಯೋಕಾಗೋಲ್ಲ. ಆದರೂ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿವರಿಗೆ ಸೂಚಿಸಿದ್ದೇವೆ. ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದರು. ಇನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶ್ರೀ...
1 137 138 139 140 141 154
Page 139 of 154