Saturday, November 23, 2024

ರಾಜ್ಯ

ರಾಜ್ಯ

ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ನಾಳೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ -ಕಹಳೆ ನ್ಯೂಸ್

ಬೆಂಗಳೂರು: ಡಿಸೆಂಬರ್ 2ನೇ ವಾರದಿಂದ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಈಗಾಗಲೇ ಸರಣಿ ಸಭೆಗಳನ್ನು ನಡೆಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಖಾಸಗಿ ಶಾಲೆ, ಬಿಬಿಎಂಪಿ, ಎಸ್ ಡಿಎಂಸಿ ಅಧ್ಯಕ್ಷರು, ಪೋಷಕರು ಹೀಗೆ ಎಲ್ಲರೊಂದಿಗೂ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿ ಶಾಲೆ ಆರಂಭದ ಬಗ್ಗೆ ವರದಿ ಸಿದ್ಧಪಡಿಸಿದ್ದಾರೆ. ಆರಂಭದಲ್ಲಿ ಪ್ರೌಢ ಶಿಕ್ಷಣ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಮ್ಮತಿ...
ರಾಜ್ಯ

ವಿದ್ಯುತ್ ದರ ಏರಿಕೆ ತಕ್ಷಣದಿಂದಲೇ ಕೈಬಿಡಬೇಕು- ಡಿಕೆ ಶಿವಕುಮಾರ್ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಲಾಕ್ ಡೌನ್ ಜಾರಿಯಾದ ನಂತ್ರ, ಜನರಿಗೆ ದುಡಿಮೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವವರೆಗೆ ವಿದ್ಯುತ್ ದರ ಏರಿಕೆ ಕೈಬಿಡಬೇಕು ಹಾಗೂ ತಕ್ಷಣದಿಂದಲೇ ಇದು ಜಾರಿಗೆ ಬರಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ...
ರಾಜ್ಯ

ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್ – ಕಹಳೆ ನ್ಯೂಸ್

ಬೆಂಗಳೂರು- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ....
ರಾಜ್ಯ

ರಾಜೀನಾಮೆ ಸ್ವೀಕಾರಗೊಂಡ ಬೆನ್ನಲ್ಲೇ ದೆಹಲಿಯತ್ತ ಪಯಣ ಬೆಳೆಸಿದ ಸಿ.ಟಿ ರವಿ -ಕಹಳೆ ನ್ಯೂಸ್

ಬೆಂಗಳೂರು: ತಮ್ಮ ರಾಜೀನಾಮೆ ಸ್ವೀಕಾರಗೊಂಡ ಬೆನ್ನಲ್ಲೇ ಸಚಿವ ಸಿ.ಟಿ ರವಿ ದೆಹಲಿಯತ್ತ ದೌಡಾಯಿಸಿದ್ದಾರೆ. ಪಕ್ಷದ ಚಟುವಟಿಕೆಗಳಲ್ಲಿ ಪೂರ್ತಿಯಾಗಿ ತೊಡಗಿಸಿಕೊಳ್ಳುವ ಸಲುವಾಗಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಸಿ.ಟಿ ರವಿಗೆ ಪಕ್ಷ ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿತ್ತು. ಅಷ್ಟೇ ಅಲ್ಲದೆ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಿದೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇದು ಮಹತ್ವದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ...
ರಾಜ್ಯ

ದೀಪಾವಳಿ ವೇಳೆ ಪಟಾಕಿ ಬ್ಯಾನ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ ಹಾಗೂ ಪಟಾಕಿ ಹಚ್ಚುವಂತಿಲ್ಲ ಎಂದು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಶೀಘ್ರವೇ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರದ ನಿರ್ಧಾರದಿಂದ ಪಟಾಕಿ ಮಾರಾಟಾರರಿಗೆ ಮತ್ತು ಪಟಾಕಿ ಖರೀದಿಸಿದ್ದವರಿಗೆ ಶಾಕ್ ಉಂಟಾಗಿದೆ. ರಾಜ್ಯ...
ರಾಜ್ಯ

ಇಂದು ರಾಜ್ಯದಲ್ಲಿ ‘ಶಾಲಾ ಆರಂಭ’ಕ್ಕೆ ಸಿಗಲಿದ್ಯಾ ಗ್ರಿನ್ ಸಿಗ್ನಲ್.? -ಕಹಳೆ ನ್ಯೂಸ್

ಬೆಂಗಳೂರು : ಕಳೆದ ಇತ್ತೀಚೆಗೆ ನಡೆದಂತ ಶಾಲೆಗಳ ಆರಂಭ ವಿಚಾರದ ಸಭೆಯಲ್ಲಿ, ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇಂದು ಮತ್ತೊಂದು ಹಂತದ ಚರ್ಚೆ ಶಾಲಾ ಆರಂಭ ಕುರಿತಂತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಅನ್ಬಕುಮಾರ್ ನೇತೃತ್ವದಲ್ಲಿ ನಡೆಯಲಿದ್ದು, ರಾಜ್ಯದಲ್ಲಿ ಇಂದು ಶಾಲಾ ಆರಂಭ ಕುರಿತಂತೆ ಗ್ರೀನ್ ಸಿಗ್ನಲ್ ನೀಡಲಿದೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಅನ್ಬಕುಮಾರ್ ನೇತೃತ್ವದಲ್ಲಿ ರಾಜ್ಯದ...
ರಾಜ್ಯ

ಒಂದು ವರ್ಷ ವಿದ್ಯುತ್ ದರ ಏರಿಕೆ ಬರೆ ಬೇಡ :ಕುಮಾರಸ್ವಾಮಿ -ಕಹಳೆ ನ್ಯೂಸ್

ಬೆಂಗಳೂರು- ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿರುವ ಹಿನ್ನೆಲೆಯಲ್ಲಿ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸಂಕಷ್ಟದಲ್ಲಿರುವ ಜನರ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸಬಾರದು ಎಂದು ಅವರು ಟ್ವೀಟರ್‍ನಲ್ಲಿ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕು ತಗುಲಿದ ನಂತರ ನಾಡಿನ ಜನರು ತೀವ್ರ ಆರ್ಥಿಕ...
ರಾಜ್ಯ

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ : ‘ಮಾದಕ’ ನಟಿಯರಾದ ರಾಗಿಣಿ-ಸಂಜನಾಗೆ ಜೈಲೇ ಗತಿ..! -ಕಹಳೆ ನ್ಯೂಸ್

ಬೆಂಗಳೂರು- ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಪಾಲಾಗಿರುವ ಚಿತ್ರನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಅವರುಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.ಪ್ರಕರಣದ ಆರೋಪಿಗಳಾದ ಸಂಜನಾ , ರಾಗಿಣಿ ದ್ವಿವೇದಿ, ರಾಹುಲ್, ವೀರೇನ್ ಖನ್ನಾ, ಪ್ರಶಾಂತ್, ಅಭಿಸ್ವಾಮಿ ಅವರುಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಪರಪ್ಪನ ಅಗ್ರಹಾರದಲ್ಲಿ ಇನ್ನೂ ಕಾಲ ಕಳೆಯಬೇಕಿದೆ. ತಮಗೆ ಜಾಮೀನು ನೀಡಬೇಕೆಂದು ಪ್ರಕರಣದ ಆರು ಆರೋಪಿಗಳು ಹೈಕೋರ್ಟ್‍ನ ನ್ಯಾಯಮೂರ್ತಿ ಶ್ರೀ ಹರೀಶ್‍ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠಕ್ಕೆ ಅರ್ಜಿ...
1 140 141 142 143 144 154
Page 142 of 154