ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ; ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ – ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ. ಎಲ್ಲ ರಾಜ್ಯ...