Recent Posts

Monday, January 20, 2025

ರಾಜ್ಯ

ರಾಜ್ಯಶಿಕ್ಷಣ

BREAKING NEWS : ರಾಜ್ಯದಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಪುನರಾರಂಭ – ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳ ಆರಂಭದ ನಂತ್ರ, ಶಾಲಾ-ಕಾಲೇಜು ಯಾವಾಗ ಆರಂಭಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಇಂತಹ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಲಿದ್ದಾರೆ. ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುವುದಾಗಿ ಘೋಷಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಸಿಎಂ ಯಡಿಯೂರಪ್ಪ, 2021ರ ಜನವರಿ...
ರಾಜ್ಯಶಿಕ್ಷಣ

ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ‘ಶಾಲಾ-ಕಾಲೇಜು ಆರಂಭ’ದ ಭವಿಷ್ಯ ನಿರ್ಧಾರ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿರುವ ಕಾರಣ, ಇಂದು ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯುತ್ತಿರುವ ಸಿಎಂ ನೇತೃತ್ವದ ಸಭೆ ಮಹತ್ವದ್ದಾಗಿದ್ದು, ಜನವರಿ 1ರಿಂದ ರಾಜ್ಯದಲ್ಲಿ ಶಾಲೆಗಳು, ಪಿಯು ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡ್ತಾರಾ ಎನ್ನುವ ಬಗ್ಗೆ ಕಾದು ನೋಡಬೇಕಿದೆ. ಈಗಾಗಲೇ ತಾಂತ್ರಿಕ...
ರಾಜ್ಯಶಿಕ್ಷಣ

ರಾಜ್ಯದಲ್ಲಿ ‘ಶಾಲೆ’ಗಳ ಆರಂಭಕ್ಕೆ ಗ್ರೀನ್ ಸಿಗ್ನಲ್.? ಸಿಎಂ ಯಡಿಯೂರಪ್ಪ ಒಪ್ಪಿಗೆಯಷ್ಟೇ ಬಾಕಿ.? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜನವರಿ 1, 2020ರಿಂದ ಶಾಲೆಗಳ ಆರಂಭಕ್ಕೆ ಉನ್ನತ ಮಟ್ಟದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಹೀಗಾಗಿ ಜನವರಿ 1ರಿಂದ 10 ಮತ್ತು 12ನೇ ತರಗತಿಯ ಶಾಲೆಗಳು ರಾಜ್ಯದಲ್ಲಿ ಆರಂಭವಾಗೋದು ಪಕ್ಕಾ ಆದಂತೆ ಆಗಿದ್ದು, ಸಿಎಂ ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ರೇ.. ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗುತ್ತದೆ. ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಕಳೆದ 9 ತಿಂಗಳಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭಗೊಂಡಿರಲಿಲ್ಲ. ಇಂತಹ...
ರಾಜ್ಯ

ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ಸರ್ಕಾರವು ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಚರ್ಚ್ ಗಳಲ್ಲಿ ಹಾಗೂ ಹೋಟೆಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಸಾರ್ವಜನಿಕರು ಸರಳವಾಗಿ ಮತ್ತು ಸುರಕ್ಷಿತವಾಗಿ ಹಬ್ಬ ಆಚರಿಸಬೇಕೆಂದು ವಿನಂತಿಸುತ್ತೇನೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಮಾರ್ಗಸೂಚಿಗಳು ಇಂತಿವೆ :- *ಕ್ರೈಸ್ತ ಧರ್ಮದ ಚರ್ಚ್‌ಗಳಲ್ಲಿ...
ರಾಜ್ಯಶಿಕ್ಷಣ

ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಆರೋಪ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು : ಆರನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡಿರುವ ಪಾಠವೊಂದು ಪ್ರಕಟವಾಗಿರುವ ಸಂಬಂಧ ಬಹಳ ಚರ್ಚೆಯಲ್ಲಿದ್ದು, ಈ ಕುರಿತು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸುರೇಶ್ ಕುಮಾರ್ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ಪಾಠ ವೊಂದು ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಪ್ರಕಟವಾಗಿರುವ ವಿಚಾರ ಇಂದು ಬಹಳ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಆದ್ಯ ಸುಲೋಚನಾ ಮುಳಿಯ ನೇತೃತ್ವದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿ ಪುತ್ತೂರಿನ ವಿದ್ಯಾರ್ಥಿಗಳಿಂದ ಸಮಾಜಮುಖಿ ಚಿಂತನೆಗೆ ನಾಂದಿ – ಕಹಳೆ ನ್ಯೂಸ್

ಪುತ್ತೂರು, ಡಿ.16 : ಕೇಶದಾನದಿಂದ ಕ್ಯಾನ್ಸರ್ ಕಾರಣದಿಂದಾಗಿ ರೂಪ ಕಳೆದುಕೊಂಡ ರೋಗಿಗಳಿಗೆ ವಿಗ್ ನೀಡುವುದರ ಮೂಲಕ ಅವರ ಮುಖದಲ್ಲಿ ಮಂದಹಾಸ ತರಬಹುದು. ರಕ್ತದಾನ, ಅಂಗದಾನ ಇದರಂತೆ ಕೇಶದಾನ ಮಾಡುವ ನಿಟ್ಟಿನಲ್ಲಿ ಪುತ್ತೂರಿನ 9 ಶಾಲಾ ವಿದ್ಯಾರ್ಥಿಗಳು ಯೋಜನೆಯೊಂದನ್ನು ರೂಪಿಸಿದ್ದಾರೆ. ಕೇಶದಾನ ಮಾಡುವ ಅಪರೂಪದ ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದು ಇದು ಉತ್ತಮ ಯೋಜನೆಯಾಗಿ ಹೊರಹೊಮ್ಮಿದೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಆದ್ಯ ಸುಲೋಚನಾ ಮುಳಿಯ ಎಂಬ ಕುವರಿಯು...
ಬೆಂಗಳೂರುರಾಜ್ಯಸಿನಿಮಾ

‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾದ ಹಾಡಿಗೆ ಧ್ವನಿ ನೀಡಿ ಗಾಯಕರಾದ ನಟ ಪೃಥ್ವಿ ಅಂಬರ್..! – ಕಹಳೆ ನ್ಯೂಸ್

ಬೆಂಗಳೂರು, ಡಿ.16 : ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿರುವುದು ಮಾತ್ರವಲ್ಲ ಹಾಡಿಗೆ ಧ್ವನಿ ನೀಡಿದ್ದಾರೆ.   'ಲೈಫ್ ಈಸ್ ಬ್ಯೂಟಿಫುಲ್' ಚಿತ್ರಕ್ಕೆ ನೊಬಿನ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಸಾಹಿತ್ಯ ರಚಿಸಿದ್ದಾರೆ. ಇನ್ನು ತನ್ನ ಈ ಅನುಭವದ ಬಗ್ಗೆ ಮಾತನಾಡಿದ ನಟ ಪೃಥ್ವಿ ಅಂಬರ್‌, ''ಇದೇ ಮೊದಲ ಬಾರಿಗೆ ಸಿನಿಮಾಕ್ಕೆ ಹಾಡಿದ್ದೇನೆ. ಈ...
ರಾಜ್ಯ

ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ, ಬೇಳೆ ನೀಡಿ: ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಸಂದರ್ಭದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ನೀಡುವುದು ಕಷ್ಟ ಎಂದು ಸರ್ಕಾರ ಹೈಕೋರ್ಟ್‌ಗೆ ಹೇಳಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ ಹಾಗೂ ಬೇಳೆಯನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲು ಡಿಸೆಂಬರ್ 5ರಂದೇ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 1 ಕೆಜಿ ಅಯೊಡೈಸ್ಡ್ ಉಪ್ಪು, ತೊಗರಿ ಬೇಳೆ...
1 147 148 149 150 151 165
Page 149 of 165