ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅವರ ಮಾತನ್ನು ಯಾರು ಕೇಳ್ತಾರೆ..? : ಸಿಎಂ ವ್ಯಂಗ್ಯ – ಕಹಳೆ ನ್ಯೂಸ್
ಬೆಂಗಳೂರು - ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಹೇಳಿದರು. ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ....