ದೆಹಲಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಸಿಎಂ ಬಿಎಸ್ವೈ..! -ಕಹಳೆ ನ್ಯೂಸ್
ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರುಗಳ ದಿಢೀರ್ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ದೆಹಲಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ ಎನ್ನಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ನಾಯಕತ್ವವನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಪುಕಾರು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಒಂದು ವೇಳೆ ನನ್ನ ತೀರ್ಮಾನಕ್ಕೆ ವಿರುದ್ದವಾಗಿ ನಾಯಕತ್ವ ಬದಲಾವಣೆ ಮಾಡುವಂತಹ ದುಸ್ಸಾಹಕ್ಕೆ ಕೈ ಹಾಕಿದರೆ ತಮ್ಮ ಮುಂದಿನ ದಾರಿ ಏನಾಗಿರುತ್ತದೆ ಎಂಬ ಮುನ್ಸೂಚನೆಯನ್ನು ದೆಹಲಿ ನಾಯಕರಿಗೆ ಮುಟ್ಟಿಸಿದ್ದಾರೆ...