ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್
ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...