ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್
ಬೆಂಗಳೂರು, ಆ 09 : ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ದೃಢಪಟ್ಟಿರುವ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ...