ಮುಡಾ ಪ್ರಕರಣ: ಮಾ.24ಕ್ಕೆ ವಿಚಾರಣೆ ಮುಂದೂಡಿಕೆ-ಕಹಳೆ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ವರದಿ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ. 24ಕ್ಕೆ ವಿಚಾರಣೆ ಮುಂದೂಡಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನಲ್ಲಿ ಕೆಲವೊಂದು ಗೊಂದಲಗಳಿವೆ. ಲೋಕಾ ಪೊಲೀಸರು ಸಲ್ಲಿಸಿರುವ ವರದಿಯಲ್ಲಿ ಆರೋಪಿ 1ರಿಂದ 4ರವರೆಗಿನ ಅರೋಪಿಗಳ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು...