Recent Posts

Monday, January 20, 2025

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ ; ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ (Rajasthan) ಬೆಂಗಳೂರು (Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ಆರೋಪಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿ, ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಇದೇ ವೇಳೆ...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಪರಿಣಾಮವಾಗಿ ಹಲವು ಕಡೆ ಅವಾಂತರಗಳು ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಕುಸಿದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೆಂಗಳೂರು, ಜುಲೈ 26: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ : ರಾಜ್ಯ ಸರಕಾರಕ್ಕೆ ಶರಣ್‌ ಪಂಪ್‌ವೆಲ್‌ – ಕಹಳೆ ನ್ಯೂಸ್

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ; ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ.   25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು....
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಕೇರಳದಲ್ಲಿ ನಿಫಾ ಆತಂಕ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾಕ್ಕೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ನಿಫಾ ವೈರಸ್‌ ಸೋಂಕಿಗೆ ಒಳಗಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಕ್ಕೆ ಅನೇಕ ಮಂದಿ ಆಗಮಿಸುತ್ತಿದ್ದು, ಅವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಸೂಚನೆ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಪುಂಜಾಲಕಟ್ಟೆಯಲ್ಲಿ ದೈವಗಳ ಕಾರಣಿಕದಿಂದ ತಪ್ಪಿದ ಅನಾಹುತ, ಉಳಿಯಿತು ನೂರಾರು ಜನರ ಪ್ರಾಣ ; ಕೆಸರು ಗದ್ದೆ ಕೂಟದ ಗದ್ದೆಗೆ ಬಿದ್ದ ವಿದ್ಯುತ್‌ಕಂಬ – ಕಹಳೆ ನ್ಯೂಸ್

ಪುಂಜಾಲಕಟ್ಟೆ, ಜು 24 : ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು...
ಉತ್ತರಕನ್ನಡರಾಜ್ಯಸುದ್ದಿ

ಶಿರೂರು ಗುಡ್ಡ ಕುಸಿತ : ನಾಪತ್ತೆಯಾದ ಅರ್ಜುನ್​ಗಾಗಿ ತೀವ್ರ ಶೋಧ! ಹುಡುಕಾಟಕ್ಕೆ ಮತ್ತೊಂದು ತಂಡ ಆಗಮನ – ಕಹಳೆ ನ್ಯೂಸ್

ಶಿರೂರು: ಹೆದ್ದಾರಿಯಲ್ಲಿ ಬದಿ ಲಾರಿಯನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಯುವಕ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿತ್ತು. ಕೇರಳ ಕೋಝಿಕ್ಕೋಡ್ ಮೂಲದ ಯುವಕ ಅರ್ಜುನ್ ​(30) ಲಾರಿ ಚಾಲಕನಾಗಿದ್ದು, ಜುಲೈ 16ರಂದು ಬೆಳಗಾವಿಯಿಂದ ಟ್ರಕ್‌ನಲ್ಲಿ ಸುಮಾರು 40 ಟನ್‌ಗಳಷ್ಟು ಮರ ತುಂಬಿಕೊಂಡು ಕೋಝಿಕ್ಕೋಡ್‌ ಮಾರ್ಗ ತೆರಳುತ್ತಿದ್ದರು. ಈ ದುರ್ಘಟನೆ ಸಂಭವಿಸಿದಾಗ ಆತ ಶಿರೂರು ಬಳಿ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಭೂಕುಸಿತವು ಹೆದ್ದಾರಿಯ...
1 19 20 21 22 23 165
Page 21 of 165