‘ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ, ಬಿಜೆಪಿಯೇ ಮಂಡ್ಯ ಟಿಕೆಟ್ ಉಳಿಸಿಕೊಳ್ಳಬೇಕು ಎಂದು ಕೇಳಿದ್ದಾರೆ ‘ ; ಸಂಸದೆ ಸುಮಲತಾ ಅಂಬರೀಶ್ – ಕಹಳೆ ನ್ಯೂಸ್
ಮಂಡ್ಯ : ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ. ಬಿಜೆಪಿಗೆ ಮಂಡ್ಯ ಉಳಿಸಿಕೊಂಡರೆ ಪಕ್ಷ ಕಟ್ಟಲು ಸಹಕಾರಿಯಾಗಿದ್ದು, ನಾನು ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರ್ಪಡೆಗೆ ತಾಂತ್ರಿಕವಾಗಿ ಅಡ್ಡಿಯಾಗಿದೆ. ಆ ಕಾರಣಕ್ಕಾಗಿ ನಾನು ಬಾಹ್ಯ ಬೆಂಬಲ ನೀಡಿದ್ದು, ಇದು ಬಿಜೆಪಿ ರಾಷ್ಟ್ರೀಯ ನಾಯಕರೆ ನನಗೆ ಹೇಳಿದ್ದಾರೆ. ನಾನು ಮೋದಿ ಹಾಗೂ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದಾಗಲೂ...