ಕೋಲಾರ ಎಪಿಎಂಸಿ, ಜೈಲಿಗೆ ಉಪಲೋಕಾಯುಕ್ತ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಪ್ರಕರಣ-ಕಹಳೆ ನ್ಯೂಸ್
ಕೋಲಾರ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ನಗರದ ಎಪಿಎಂಸಿ ಮಾರುಕಟ್ಟೆ ಹಾಗೂ ಜೈಲಿಗೆ ಸೋಮವಾರ ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಎಪಿಎಂಸಿಯಲ್ಲಿ ರೈತರಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ, ತ್ಯಾಜ್ಯ ತುಂಬಿಕೊಂಡಿದೆ, ಕಮಿಷನ್ ಹೆಚ್ಚಿಗೆ ವಸೂಲಿ ಮಾಡುತ್ತಿದ್ದಾರೆ, ಒಳಗೆ ಏನು ನಡೆಯುತ್ತಿದೆ ಎಂಬುದು ಅಲ್ಲಿನ ಅಧಿಕಾರಿಗಳಿಗೇ ಗೊತ್ತಿಲ್ಲ. ಅವರು ಏನು ಕೆಲಸ ಮಾಡುತ್ತಿದ್ದರೋ ಏನೋ? ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇನೆ ಎಂದರು. ವಸತಿ ಪ್ರದೇಶದ ನಡುವೆ...