ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ ಪಿಎಸ್ಐ ವರ್ಷಾ : ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಅಪರೂಪದ ಘಟನೆ – ಕಹಳೆ ನ್ಯೂಸ್
ಮಂಡ್ಯ: ಅದೊಂದು ಭಾವುಕತೆಗೆ ಸಾಕ್ಷಿಯಾದ ಕ್ಷಣ. ಒಂದೆಡೆ ತಂದೆಯ ವರ್ಗಾವಣೆ, ಮತ್ತೊಂದೆಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆ. ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆ ಎನ್ನಿಸುವಂತಹ ಅನುಭವ. ಇತ್ತ ಮಗಳಿಗೂ ಖುಷಿ ನೀಡಿದ ಸಂದರ್ಭ. ಹೌದು, ಇಂತಹದೊಂದು ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ. ಠಾಣೆಯಲ್ಲಿ ಎಸ್ಐ ಆಗಿದ್ದ ಬಿ.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ...