ಸಿದ್ದು ಸರ್ಕಾರದ ಬಂಡಿ ನಿಂತಲ್ಲೇ ನಿಂತಿದೆ, ಅಭಿವೃದ್ಧಿ ಮಾತೇ ಇಲ್ಲ : ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್
ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸರಕಾರ ಮುಂದೆ ಹೋಗುತ್ತಿಲ್ಲ. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗದ ವಾಹನದಂತಾಗಿದೆ ಸರಕಾರದ ಪರಿಸ್ಥಿತಿ ಎಂದು ಟೀಕಿಸಿದರು....