ಕುದ್ರೋಳಿ ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ಅದ್ದೂರಿ ಮೆರವಣಿಗೆ ಮೂಲಕ ರಾಜ್ಯಾಧ್ಯಕ್ಷ, ಸಂಸದರಾದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್
ಮಂಗಳೂರು, ಏ 18 : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ಚುನಾವಣ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ 4000 ಕೋಟಿ ರೂ ಮಿಕ್ಕಿ ಅನುದಾನ ತಂದು ನಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ. ಇನ್ನು ಸಾಕಷ್ಟು ಅಭಿವೃದ್ಧಿ ಮಾಡಲಿದ್ದು, 2025-26 ರ...