ಬಿಜೆಪಿ ಮತ್ತೆ ಅಧಿಕಾರಕ್ಕೆ ; ಇನ್ನಷ್ಟು ಅಭಿವೃದ್ಧಿ : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ, ಪ್ರಣಾಳಿಕೆ ಸಲಹಾ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವ ಶ್ರೀಪಾದ್ ನಾಯಕ್ – ಕಹಳೆ ನ್ಯೂಸ್
ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬದ್ಧವಾಗಿದ್ದು, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯ ಬಿಜೆಪಿ ಸರಕಾರ ಹಲವು ಅಭಿವೃದ್ಧಿ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡಿದೆ. ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಆ ಮೂಲಕ ಇನ್ನಷ್ಟು ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು, ಹಗಡು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ರವಿವಾರ...