Saturday, January 25, 2025

ರಾಜ್ಯ

ಉಡುಪಿರಾಜ್ಯಸುದ್ದಿ

ಫೆ.22 ರಿಂದ ಮಾ.5ರ ತನಕ ಉಡುಪಿ – ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಶೃಂಗೇರಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿತೀರ್ಥ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ” ಅತಿರುದ್ರ ಮಹಾಯಾಗ ” – ಕಹಳೆ ನ್ಯೂಸ್

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದ ಅಭಿವೃದ್ಧಿ ಟ್ರಸ್ಟ್‌ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆ.22 ರಿಂದ ಮಾ.5ರ ತನಕ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೇಗುಲದಲ್ಲಿ ಅತಿರುದ್ರ ಮಹಾಯಾಗ ನಡೆಯಲಿದೆ ಎಂದು ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ತಿಳಿಸಿದರು. ದೇಗುಲದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,...
ರಾಜ್ಯರಾಷ್ಟ್ರೀಯಸಿನಿಮಾಸುದ್ದಿ

‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಪಡೆದ ರಿಷಬ್ ಶೆಟ್ಟಿ ; ಪಂಚೆಯಲ್ಲಿ ಮಿಂಚಿದ ನಟ – ಕಹಳೆ ನ್ಯೂಸ್

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಟ ರಿಷಬ್ ಶೆಟ್ಟಿ (Rishab Shetty) ಅವರಿಗೆ ಇತ್ತೀಚೆಗೆ 'ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ' ಘೋಷಣೆ ಆಗಿತ್ತು. ಅವರಿಗೆ 'ಅತ್ಯಂತ ಭರವಸೆಯ ನಟ' ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ.ರೂಪ ವಿರುದ್ಧ ಲಿಖಿತ ದೂರು ನೀಡಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ದೂರು ನೀಡಿದ್ದೇನೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ರೋಹಿಣಿ ಸಿಂಧೂರಿ ಮಾತನಾಡುತ್ತಾ, ನಾನು ಸಮಾಜಿಕ ಜಾಲತಾಣದಲ್ಲಿ ಸಕ್ರೀ ಯವಾಗಿಲ್ಲ. ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಯಾವತ್ತೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪಗಳನ್ನು ಮಾಡಬಾರದು. ಸದ್ಯ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಇಂದಿನಿಂದ 2 ದಿನ ” ಮಂಗಳೂರು ಲಿಟ್‌ ಫೆಸ್ಟ್‌ ” | ‘ದಿ ಐಡಿಯಾ ಆಫ್‌ ಭಾರತ್‌’ 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣ ; ರಾಷ್ಟ್ರೀಯ, ಅಂತಾರಾಷ್ಟ್ರೀಯ ಖ್ಯಾತಿಯ ಸಾಹಿತಿಗಳು, ಕಲಾವಿದರು, ಪತ್ರಕರ್ತರು ಭಾಗಿ – ಸಮಾಲೋಚನೆ – ಕಹಳೆ ನ್ಯೂಸ್

ಮಂಗಳೂರು: ಸಮಾಜದ ಹಲವು ಜ್ವಲಂತ ವಿಚಾರಗಳ ಬಗ್ಗೆ ಹೊಸ ಹೊಳಹು ಮೂಡಿಸುವ ಆಶಯದೊಂದಿಗೆ ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ ಫೆ.18 ಮತ್ತು 19ರಂದು ನಡೆಯುತ್ತಿದೆ. ಭಾರತ್‌ ಫೌಂಡೇಶನ್‌ ಹಮ್ಮಿಕೊಂಡಿರುವ ಲಿಟ್‌ ಫೆಸ್ಟ್‌ ನಗರದ ಟಿಎಂಎ ಪೈ ಸಭಾಭವನದಲ್ಲಿ “ದಿ ಐಡಿಯಾ ಆಫ್‌ ಭಾರತ್‌’ ಎಂಬ ಪರಿಕಲ್ಪನೆಯಡಿ ನಡೆಯಲಿದ್ದು 50ಕ್ಕೂ ಅಧಿಕ ವಿಷಯ ಪರಿಣಿತರು ಸಮಾಲೋಚನೆ ನಡೆಸಲಿದ್ದಾರೆ. ಒಟ್ಟು 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣದಲ್ಲಿ ನಡೆಯಲಿವೆ. ಪ್ರತಿಬಾರಿಯೂ ರಾಷ್ಟ್ರೀಯ, ಅಂತಾರಾಷ್ಟ್ರೀಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿಸುಬ್ರಹ್ಮಣ್ಯ

ಮಹಾ ಶಿವರಾತ್ರಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದಿಂದ ಸ್ವಚ್ಛತಾ ಪಾಠ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಹಬ್ಬ ಎಂದ ಕೂಡಲೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳು ಪಾದಯಾತ್ರೆ ಮೂಲಕ ಆಗಮಿಸಲು ಆರಂಭಿಸುತ್ತಾರೆ. ಹೀಗೆ ಬರುವ ಪಾದಯಾತ್ರಾರ್ಥಿಗಳಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲು ಶೌರ್ಯ ವಿಪತ್ತು ನಿರ್ವಹಣ ತಂಡ ಕೆಲಸ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾ ಶಿವರಾತ್ರಿ ಅಂಗವಾಗಿ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಹಾಗೂ ಚಾರ್ಮಾಡಿ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಾರೆ. ಈ ರೀತಿ ಬರುವ ಪಾದಯಾತ್ರಿಗಳು ಅಲ್ಲಲ್ಲಿ ವಿಶ್ರಾಂತಿ ಪಡೆದು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶಿವರಾತ್ರಿ ಜಾಗರಣೆ : ಧರ್ಮಸ್ಥಳಕ್ಕೆ ಬರುತ್ತಿದ್ದಾರೆ 50ಸಾವಿರ ಪಾದಯಾತ್ರಿಗಳು – ಕಹಳೆ ನ್ಯೂಸ್

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 18ರಂದು ನಡೆಯುವ ಶಿವರಾತ್ರಿ ಆಚರಣೆಗೆ ನಾಡಿನ ವಿವಿಧೆಡೆಯಿಂದ 50 ಸಾವಿರಕ್ಕೂ ಅಧಿಕ ಪಾದಯಾತ್ರಿಗಳ ಸಹಿತ ಲಕ್ಷಕ್ಕೂ ಅಧಿಕ ಭಕ್ತರು ಸೇರುವುದರಿಂದ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಸಹಿತ ನಾನಾ ಊರುಗಳಿಂದ ಪ್ರತೀ ವರ್ಷದಂತೆ ಅನೇಕ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತರು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. 50 ಸಾವಿರ ಪಾದಯಾತ್ರಿಗಳು ಈಗಾಗಲೇ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ ; ದೇವಸ್ಥಾನ, ಮಠಗಳ ಜೀರ್ಣೋದ್ಧಾರ ಕಾಮಗಾರಿಗೆ 1,000 ಕೋಟಿ ರೂ. ಮೀಸಲು – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ...
1 77 78 79 80 81 167
Page 79 of 167