ಕೋವಿಡ್ ಆತಂಕ – ಶಾಲೆ, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ ; ಎರಡು ಡೋಸ್ ಲಸಿಕೆ ಕಡ್ಡಾಯ – ಕಹಳೆ ನ್ಯೂಸ್
ಬೆಂಗಳೂರು/ ಬೆಳಗಾವಿ, ಡಿ 26 ಚೀನಾ, ಅಮೆರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್ ಪ್ರಕಟಿಸಿದೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಶಾಲೆ, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆ, ಕಾಲೇಜು ತರಗತಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವ...