Monday, April 7, 2025

ದೆಹಲಿ

ಕ್ರೈಮ್ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

REASI ATTACK | ಉಗ್ರನ ಸ್ಕೆಚ್‌ ತಯಾರು, ಹಿಡಿದುಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ – ಕಹಳೆ ನ್ಯೂಸ್

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಉಗ್ರನೊಬ್ಬನ ಸ್ಕೆಚ್​ ರೆಡಿಯಾಗಿದ್ದು, ಹಿಡಿದುಕೊಟ್ಟವರಿಗೆ ಪೊಲೀಸ್​ ಇಲಾಖೆಯು 20 ಲಕ್ಷ ರೂ. ನೀಡುವುದಾಗಿ ಘೋಷಿಸಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಎರಡು ದಿನಗಳ ನಂತರ , ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಪೈಕಿ ಒಬ್ಬನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ದಾಳಿಯಲ್ಲಿ 10 ಮಂದಿ ಪ್ರಾಣಬಿಟ್ಟಿದ್ದಾರೆ....
ದೆಹಲಿರಾಜಕೀಯಸುದ್ದಿ

10 ಜನ ಪಕ್ಷೇತರರ ಬೆಂಬಲ! ಬಿಜೆಪಿಗೆ ಹೆಚ್ಚಾದ ಬಲ ; ಈಗ ಎನ್ ಡಿಎ 292 ಅಲ್ಲ 303…! – ಕಹಳೆ ನ್ಯೂಸ್

ಹೊಸದಿಲ್ಲಿ: ಬಿಜೆಪಿಯು ಜೆಡಿಯು ಹಾಗೂ ಟಿಡಿಪಿ ಸಹಾಯದೊಂದಿಗೆ ಅಧಿಕಾರ ರಚಿಸಲು ಮುಂದಾಗಿದೆ. ಇದರ ಮಧ್ಯೆ ಸಣ್ಣ ಪಕ್ಷಗಳ ಹಾಗೂ ಪಕ್ಷೇತರವಾಗಿ ಗೆದ್ದ 10 ಸಂಸದರು ಎನ್‌ ಡಿಎಗೆ ಬೆಂಬಲ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ. ಪರಿಣಾಮವಾಗಿ ಎನ್ ಡಿಎ ಮೈತ್ರಿಯ ಬಲ 303ಕ್ಕೆ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಬೆಂಬಲ ನೀಡಿದ 10 ಜನ ಸಂಸದರ ಹೆಸರು ಬಹಿರಂಗವಾಗಿಲ್ಲ. ಸಿಕ್ಕಿಂ ಕ್ರಾಂತಿ ಮೋರ್ಚಾ, ಶಿರೋಮಣಿ ಅಕಾಲಿ ದಳ, ವೈಸ್...
ದೆಹಲಿಮುಂಬೈರಾಜಕೀಯಸುದ್ದಿ

ಮಹಾರಾಷ್ಟ್ರದ ಲೋಕಸಭಾ ಸ್ಥಾನಗಳ ಸೋಲಿನ ನೈತಿಕ‌ ಹೊಣೆಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟನೆ ಮಾಡುತ್ತೇನೆ ; ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ ದೇವೇಂದ್ರ ಫಡ್ನವೀಸ್ – ಕಹಳೆ ನ್ಯೂಸ್

ಮುಂಬೈ : ಮಹಾರಾಷ್ಟ್ರದ ಲೋಕಸಭಾ ಸ್ಥಾನಗಳ ಸೋಲಿನ ಹೊಣೆಯನ್ನು ಹೊತ್ತುಕೊಂಡಿರುವ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಅವರನ್ನು ಸಚಿವ ಸ್ಥಾನದಿಂದ ಮುಕ್ತಗೊಳಿಸುವಂತೆ ಪಕ್ಷದ ನಾಯಕತ್ವವನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಒಕ್ಕೂಟವು ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾದ ನಂತರ, ಫಡ್ನವಿಸ್ ಅವರು ಫಲಿತಾಂಶಗಳ ಸಂಪೂರ್ಣ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡಿದ್ದಾರೆ ಎಂದು ಹೇಳಿದರು....
ದೆಹಲಿರಾಷ್ಟ್ರೀಯಸುದ್ದಿ

ಎನ್‌ಡಿಎ ಮಿತ್ರಪಕ್ಷಗಳ ಜತೆ ನರೇಂದ್ರ ಮೋದಿ ಸಭೆ ; ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ..!! – ಕಹಳೆ ನ್ಯೂಸ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್‌ಡಿಎ (NDA) ಮೈತ್ರಿಕೂಟವು ಸರ್ಕಾರ ರಚಿಸಲು ಸಜ್ಜಾಗಿದೆ. ಎನ್‌ಡಿಎ ಮಿತ್ರಪಕ್ಷಗಳ ಜತೆ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದು, ನರೇಂದ್ರ ಮೋದಿ ಅವರಿಗೆ ನಿತೀಶ್‌ ಕುಮಾರ್‌, ಚಂದ್ರಬಾಬು ನಾಯ್ಡು ಸೇರಿ ಹಲವು ನಾಯಕರು ಬೆಂಬಲ ಪತ್ರ ನೀಡಿದ್ದಾರೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರು ಜೂನ್‌ 7ರಂದು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ...
ಕ್ರೈಮ್ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುಮಂಗಳೂರುಮುಂಬೈರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್

ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.   ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...
ದೆಹಲಿರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಫಲಿತಾಂಶ : ಆರಂಭದಲ್ಲೇ 268ಕ್ಕೂ ಅಧಿಕ ಕ್ಷೇತ್ರಗಳಲ್ಲಿ NDA…! ಕರ್ನಾಟಕ ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಇನ್ನೇನು ಕೆಲವೇ ಹೊತ್ತಿನಲ್ಲಿ ಹೊರ ಬಿಳಲಿದೆ. ವಿಜಯ ಮಾಲೆ ಯಾರ ಕೊರಳಿಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ. ಆರಂಭಿಕ ಹಂತದಲ್ಲಿಯೇ ಕರ್ನಾಟಕ ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ ಸಾಧಿಸಿದೆ. ಅತ್ತ, ದೇಶದ ಮಟ್ಟದಲ್ಲಿ ಎನ್‌ಡಿಎ ಮೈತ್ರಿಕೂಟವು ಸ್ಪರ್ಧೆಯೊಡ್ಡುವ ಲಕ್ಷಣಗಳು ಗೋಚರಿಸಿವೆ. ಎನ್‌ಡಿಎ ಮೈತ್ರಿಕೂಟವು (NDA) ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 268ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌...
ದೆಹಲಿವಾಣಿಜ್ಯಸುದ್ದಿ

ಜೂನ್‌ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಸಿಹಿಸುದ್ದಿ : ‘LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 72ರೂ.ಇಳಿಕೆ – ಕಹಳೆ ನ್ಯೂಸ್

ನವದೆಹಲಿ : ಜೂನ್‌ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದ್ದು, ಇಂದು ದೇಶಾದ್ಯಂತ ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 72ರೂ. ಇಳಿಕೆಯಾಗಿದೆ. ಮಾಹಿತಿಯ ಪ್ರಕಾರ, ದೇಶದ ನಾಲ್ಕು ಮೆಟ್ರೋಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ದೇಶದ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳು 69.5 ರೂ.ಗಳಷ್ಟು ಅಗ್ಗವಾಗಿವೆ. ಇದರ ನಂತರ, ಎರಡೂ ಮೆಟ್ರೋಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆ ಕ್ರಮವಾಗಿ 1676 ಮತ್ತು...
ದೆಹಲಿಸುದ್ದಿ

ಕಾನೂನುಬಾಹಿರ ಚಟುವಟಿಕೆಗಳ ಅಡಿಯಲ್ಲಿ ಬಂಧಿತರಾಗಿರುವ 8 ಮಂದಿ PFI ಕಾರ್ಯಕರ್ತರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌-ಕಹಳೆ ನ್ಯೂಸ್

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧಿತರಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)ನ ಎಂಟು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ರದ್ದುಗೊಳಿಸಿದೆ. ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್‌ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಿ ಎಂದು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರಿದ್ದ...
1 9 10 11 12 13 14
Page 11 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ