ಲೋಕಸಭೆ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್ : ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್
ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ. ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು...