ಸಿ ಡಿ ಎಂದರೆ ಸಾಕು ಬಿಜೆಪಿಯ ಪ್ರತಿಯೊಬ್ಬರೂ ಗಾಬರಿಬಿದ್ದು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ! ಕಾಂಗ್ರೆಸ್-ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದ್ದು, ಸೆಕ್ಸ್ ಸಿಡಿ, ಭ್ರಷ್ಟಾಚಾರದ ಸಿಡಿಗಳಿಂದ ಈ ಸರ್ಕಾರ ನಡೆಯುತ್ತಿದೆ ಎಂದು ಕೆಪಿಸಿಸಿ ವ್ಯಂಗ್ಯವಾಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಜಲಸಂಪೂನ್ಮೂಲ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ ಎಂದು ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ಟ್ ಮಾಡಿರುವ ರಾಜ್ಯ...