ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು – ಕಹಳೆ ನ್ಯೂಸ್
ಬೆಂಗಳೂರು: ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿದ್ದರೆ ಕೂಡಲೇ ರಾಜೀನಾಮೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ವಿಕಾಸ ಸೌಧದಲ್ಲಿಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಜೊತೆ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಭೂಮಿಗೆ ಎಷ್ಟು ದೂರ ಅಂತರ ಇದೆಯೋ ಅಷ್ಟೇ ಅಂತರದ ಸುಳ್ಳನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಒಂದು ವೇಳೆ...