ಜು. 30, 31ರಂದು ಸಿಇಟಿ ಪರೀಕ್ಷೆ ; ಪಿಜಿಸಿಇಟಿ, ಡಿಪ್ಲೊಮಾ ಸಿಇಟಿ ಪರೀಕ್ಷೆ ಮುಂದೂಡಿಕೆ – ಕಹಳೆ ನ್ಯೂಸ್
ಬೆಂಗಳೂರು, ಜು 22 : ಸಿಇಟಿ ಪರೀಕ್ಷೆಯ ಜು 30, 31ರಂದು ನಡೆಯಲಿದ್ದು, 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯ ಎರಡು ದಿನಗಳ ಮೊದಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಸೇರಿದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪರೀಕ್ಷೆಯು ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ನಡೆಯಲಿದ್ದು, ಎಸ್‌ಒಪಿ ತಂಡಗಳನ್ನು ಈಗಾಗಾಲೇ ರಚನೆ ಮಾಡಲಾಗಿದೆ....