Sunday, January 19, 2025

ಬೆಂಗಳೂರು

ಬೆಂಗಳೂರು

ಪ್ರಥಮ ಮತ್ತು ದ್ವಿತೀಯ ಪಿಯುಸಿಯ ದಾಖಲಾತಿ ದಿನಾಂಕ ಜನವರಿ 8ರವರೆಗೆ ವಿಸ್ತರಣೆ-ಕಹಳೆ ನ್ಯೂಸ್

ಬೆಂಗಳೂರು : 2020-21ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾಗಲು ದಿನಾಂಕ 24-12-2020 ಕೊನೆಯ ದಿನವಾಗಿತ್ತು. ಇಂತಹ ದಿನಾಂಕವನ್ನು ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಿನಾಂಕ 08-01-2021ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2020-21ನೇ ಶೈಕ್ಷಣಿಕ ಸಾಲಿಗೆ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ದಿನಾಂಕ 24-12-2020ರವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೆÇೀಷಕರ ಮನವಿಯ ಮೇರೆಗೆ ಹಾಗೂ...
ಬೆಂಗಳೂರು

ಇಂದು ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ- ಕಹಳೆ ನ್ಯೂಸ್

ಬೆಂಗಳೂರು:ಇಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯೂ ನಡೆಯಲಿದೆ. 91 ಸಾವಿರಕ್ಕೂ ಹೆಚ್ಚು ಗ್ರಾಮೀಣ ಜನಪ್ರತಿನಿಧಿಗಳ ಭವಿಷ್ಯ ನಿರ್ಣಯವಾಗಲಿದೆ. ಎಲ್ಲ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಕ್ಕೆ ಮತ ಎಣಿಕೆ ಆರಂಭವಾಗಲಿದ್ದು, ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹಾಗೆಯೇ ಸಂಜೆ ವೇಳೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಅಂತಿಮ ಫಲಿತಾಂಶ ಹೊರಬೀಳಲಿದೆ. ದಕ್ಷಿಣ ಕನ್ನಡ 220ಗ್ರಾಮ ಪಂಚಾಯತ್ ನ ಒಟ್ಟು 3,131 ಸ್ಥಾನಗಳನ್ನು ವಿಭಜಿಸಿ 3 ಕ್ಷೇತ್ರಗಳಿಗೆ ಒಂದು ಟೇಬಲ್ ನಂತೆ...
ಬೆಂಗಳೂರು

ಜನವರಿ 1ರಿಂದ ಬಿಎಂಟಿಸಿ ಎಸಿ ಬಸ್‍ಗಳ ಟಿಕೆಟ್ ದರ ಇಳಿಕೆ-ಕಹಳೆ ನ್ಯೂಸ್

ಬೆಂಗಳೂರು : ಜನವರಿ 1 ರಿಂದ ಎಸಿ ಬಸ್‍ಗಳ ಟಿಕೆಟ್ ದರವನ್ನು ಕಡಿಮೆ ಮಾಡಲು ಬಿಎಂಟಿಸಿ ಮುಂದಾಗಿದ್ದು, ನಗರದಲ್ಲಿ 80 ಎಸಿ ಬಸ್‍ಗಳ ಸಂಚಾರ ಆರಂಭಿಸಿ, ಎಸಿ ಬಸ್‍ಗಳ ಟಿಕೆಟ್ ದರ ಕಡಿಮೆ ಮಾಡಿ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚು ಮಾಡಿಕೊಳ್ಳುವುದು ಬಿಎಂಟಿಸಿ ಆಲೋಚನೆಯಾಗಿದೆ. ಇನ್ನು ಕೊರೊನಾ ಲಾಕ್‍ಡೌನ್ ಶುರುವಾದಾಗಿನಿಂದ ಸಾಮಾನ್ಯ ಬಸ್‍ಗಳು ಕೂಡ ಸ್ಥಗಿತಗೊಂಡಿದ್ದವು. ಎಸಿ ಬಸ್‍ಗಳಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಮತ್ತು ಟಿಕೆಟ್ ದರ ಹೆಚ್ಚಿರುವುದರಿಂದ...
ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆ;ಹವಾಮಾನ ಇಲಾಖೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡ ಕವಿದ...
ಬೆಂಗಳೂರು

ಜನವರಿ 1 ರಿಂದ ಶಾಲೆ ಆರಂಭ ಖಚಿತ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಜನವರಿ 1 ರಿಂದ ಶಾಲೆ-ಕಾಲೇಜು ಪುನರಾರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ಹಾಗೆಯೇ ಖಚಿತವಾಗಿ ಜನವರಿ 1 ರಿಂದ ಶಾಲೆ ಆರಂಭಗೊಳ್ಳುತ್ತದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಜನವರಿ 1 ರಿಂದ ನಿಗದಿಯಂತೆಯೇ ಎಸ್‍ಎಸ್‍ಎಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. 6 ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆಯಡಿ ಶಾಲೆ ಆವರಣದಲ್ಲಿ ತರಗತಿಗಳು ನಡೆಯಲಿದ್ದು, ಮಕ್ಕಳು ಸುರಕ್ಷಿತ ವ್ಯವಸ್ಥೆಗಳೊಂದಿಗೆ ಪಾಠ ಕೇಳಲು ಅವಕಾಶ ಕಲ್ಪಿಸಲಾಗಿದೆ...
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟ ರೂಪಾಂತರಿ ಕೊರೊನಾ ವೈರಸ್; ಮೂವರಿಗೆ ಈ ಸೋಂಕು ದೃಢ-ಕಹಳೆ ನ್ಯೂಸ್

ಬೆಂಗಳೂರು : ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಇದೀಗ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ಈ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಮತ್ತು ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ...
ಬೆಂಗಳೂರು

ಬ್ರಿಟನ್‍ನಿಂದ ಬೆಂಗಳೂರಿಗೆ ಕೊರೊನಾ ಸೋಂಕು ಹೊತ್ತು ತಂದ ಪ್ರಯಾಣಿಕರು-ಕಹಳೆ ನ್ಯೂಸ್

ಬೆಂಗಳೂರು: ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದವರಿಂದ ರೂಪಾಂತರ ಕೊರೊನಾ ಆತಂಕ ಆರಂಭವಾಗಿದ್ದು, ಇದೀಗ 26 ಜನರಲ್ಲಿ ಸೋಂಕು ಪತ್ತೆಯಾಗಿರುವುದು ತಿಳಿದುಬಂದಿದೆ. ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದ್ದ 14 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಈ ಹಿಂದೆ ತಿಳಿದುಬಂದಿತ್ತು. ಆದರೆ ಇದೀಗ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿರುವ ಪ್ರಕಾರ 26 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದು ರೂಪಾಂತರ ಕೊರೊನಾ ವೈರಸ್ ಇರಬಹುದೇ ಎಂಬುದನ್ನು ಪರೀಕ್ಷಿಸಲು ಸ್ಯಾಂಪಲ್ ನ್ನು...
ಬೆಂಗಳೂರು

ಬೆಂಗಳೂರಿನ ಏರ್​​ಪೋರ್ಟ್​​ ರಸ್ತೆಯಲ್ಲಿ ಸರಣಿ ಅಪಘಾತ; 5 ಕಾರುಗಳಲ್ಲಿದ್ದ 9 ಮಂದಿಗೆ ಗಾಯ – ಕಹಳೆ ನ್ಯೂಸ್

ಬೆಳ್ಳಂಬೆಳಗ್ಗೆ ಬೆಂಗಳೂರಿನ ಏರ್​ಪೋರ್ಟ್​ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಐದು ಕಾರುಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಏರ್​ಪೋರ್ಟ್​ ರಸ್ತೆಯಲ್ಲಿ ಬಂದ ಸ್ವಿಫ್ಟ್​​​ ಕಾರು ಡಿವೈಡರ್​ ಹಾರಿ ಏರ್​​ಪೋರ್ಟ್​​ ಕಡೆ ಹೊರಟಿದ್ದ ನಿಸಾನ್​​​ ಕಾರಿಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಇಂಡಿಕಾ ಅಲ್ಟೋ ಸೇರಿ ಮೂರು ಕಾರುಗಳಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. ಜೊತೆಗೆ ಇಂಡಿಕಾ ಕಾರು ಚಾಲಕನೂ ಸಹ...
1 116 117 118 119 120 126
Page 118 of 126