Sunday, January 19, 2025

ಬೆಂಗಳೂರು

ಬೆಂಗಳೂರುರಾಜ್ಯ

ಪೈಗಂಬರ್ ನಿಂದನೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ; ಪೊಲೀಸರ ಮೇಲೆ ಕಲ್ಲುತೂರಾಟ – ಅಕ್ಕ ಪಕ್ಕದ ಮಗೆಗಳಿಗೆ ನುಗ್ಗಿ 100ಕ್ಕೂ ಅಧಿಕ ಮುಸ್ಲಿಂ ಯುವಕರ ರೌಡಿಸಂ ‘ ಬೆಂಗಳೂರಿನಲ್ಲಿ ‌ಕೋಮು ‌- ಗಲಭೆ ಸೃಷ್ಠಿಸಲು ಯತ್ನ ‘ – ಕಹಳೆ ನ್ಯೂಸ್

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೋನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು : ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಿಎಂ ಯಡಿಯೂರಪ್ಪ ಗುಣಮುಖರಾದಂತ ಹಿನ್ನಲೆಯಲ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೊರೋನಾವನ್ನು ಗೆದ್ದು ಬಂದಿದ್ದಾರೆ. ಕೊರೋನಾದಿಂದ ಗುಣಮುಖರಾದಂತ ಮುಖ್ಯಮಂತ್ರಿ ಬಿಎಸ್...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ಬೆಂಗಳೂರುರಾಜ್ಯಸುದ್ದಿ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು, ಆ 09 : ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಕೊರೊನಾ ದೃಢಪಟ್ಟಿರುವ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರಿ, ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು, ಆ 03 : ಸಿಎಂ ಬಿಎಸ್‌‌ವೈ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಕಾವೇರಿ ನಿವಾಸದ ಆರು ಮಂದಿಗೆ ಕೊರೊನಾ ಸೋಂಕು ಖಚಿತವಾಗಿದೆ.   ಕೊರೊನಾ ತಪಾಸಣೆಯ ಸಂದರ್ಭ ಸಿಎಂ ಅವರ ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್‌‌ ಮ್ಯಾನ್‌‌‌, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿದೆ. ತಮಗೆ ಕೊರೊನಾ ಸೋಂಕು...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕರೊನಾಗೆ ಆಯುರ್ವೇದ ಔಷಧ ಪ್ರಯೋಗ; ಬಿಎಂಸಿಆರ್​ಐ ನೋಟಿಸ್ ವಿಚಾರಕ್ಕೆ ಡಾ.ಗಿರಿಧರ ಕಜೆ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಕರೊನಾ ರೋಗಿಗಳ ಮೇಲೆ ಆಯುರ್ವೇದ ಔಷಧ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನೋಟಿಸೊಂದು ಹರಿದಾಡುತ್ತಿದೆ. ಇದು ಹಲವು ಗೊಂದಲಗಳಿಗೂ ಕಾರಣವಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ಎಥಿಕಲ್ ಕಮಿಟಿ ಹೆಸರಲ್ಲಿರುವ ಲೆಟರ್​ ಹೆಡ್​ನಲ್ಲಿ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆಯವರಿಗೆ ನೋಟಿಸ್ ಎಂದು ಬರೆಯಲಾಗಿದೆ. ಇದರಲ್ಲಿ ಆಯುರ್ವೇದ ಔಷಧದ ಕ್ಲಿನಿಕಲ್​ ಟ್ರಯಲ್​ ಇನ್ನೂ ಜಾರಿಯಲ್ಲಿರುವಾಗಲೇ ಯಶಸ್ವಿಯಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸಿದ್ದೀರಿ ಎಂದು...
ಬೆಂಗಳೂರುಸಿನಿಮಾ

ಖಳನಾಯಕಿಯಾಗಿ ನಟಿಸಲು ಸಿದ್ದ ಎಂದ ಅಂದದ ಬೆಡಗಿ ನಟಿ ಪ್ರಿಯಾಮಣಿ – ಕಹಳೆ ನ್ಯೂಸ್

ಬೆಂಗಳೂರು: ತಮಿಳು, ತೆಲುಗು ಹಾಗೂ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಅಂದದ ಬೆಡಗಿ ಪ್ರಿಯಾಮಣಿ(ಪ್ರಿಯಾ ವಾಸುದೇವ್ ಮಣಿ ಅಯ್ಯರ್) ತಮಗೆ ಖಳ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. ೨೦೦೪ರಲ್ಲಿ ಕಂಗಲಾಲ್ ಕೈಧು ಸೇ ಚಿತ್ರದೊಂದಿಗೆ ತಮಿಳು ಚಿತ್ರರಂಗಕ್ಕೆ ಪರಿಚಯವಾದ ಪ್ರಿಯಾಮಣಿ, ೨೦೦೬ರಲ್ಲಿ ‘ಪರುಥೀವೀರನ’ ತಮಿಳು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು. ಲಾಕ್ ಡೌನ್ ನಿಂದಾಗಿ ಈಗ ಮನೆಗೆ ಸೀಮಿತಗೊಂಡಿರುವ ಪ್ರಿಯಾ ಮಣಿ ’ವಿರಾಟ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಓರ್ವ ಕೊರೊನಾ ರೋಗಿಗೆ 5 ಲಕ್ಷ ಬಿಲ್ ; ಖಾಸಗಿ ಆಸ್ಪತ್ರೆ ವಿರುದ್ಧ ಸುಧಾಕರ್ ಕೆಂಡಾಮಂಡಲ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ ಖಾಸಗಿ ಆಸ್ಪತ್ರೆಯ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೆಂಡಾಮಂಡಲವಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಹಣ ಲೂಟಿ ಮಾಡುವ ಕೆಲಸ ನಡೆಯುತ್ತಲೇ ಇದೆ. ಕೊರೊನಾ ರೋಗವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಆಸ್ಪತ್ರೆಗಳು ದುಡ್ಡು ಮಾಡುವ ದಂಧೆಗೆ ಇಳಿದಿವೆ. ಸರ್ಕಾರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದರ ನಿಗದಿ ಮಾಡಿದ್ದರೂ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈಗ...
1 122 123 124 125 126
Page 124 of 126