ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ...