ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ; ‘ಸಾರ್ವಜನಿಕ ಕಾರ್ಯಕ್ರಮ ಸೇರಿ ಯಾವುದೇ ಚಟುವಟಿಕೆ ನಿರ್ಬಂಧಿಸುವ ಯಾವುದೇ ಪ್ರಸ್ತಾವನೆ ಇಲ್ಲ’ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್
ಬೆಂಗಳೂರು, ನ 30 : "ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ, ಕಾಲೇಜುಗಳು, ಸಾರ್ವಜನಿಕ ಕಾರ್ಯಕ್ರಮಗಳು ಸೇರಿದಂತೆ ಯಾವುದೇ ಚಟುವಟಿಕೆಯನ್ನು ನಿರ್ಬಂಧಿಸುವ ಪ್ರಸ್ತಾವ ಸದ್ಯಕ್ಕೆ ಇಲ್ಲ. ಕ್ರಿಸ್‌ಮಸ್, ಹೊಸ ವರ್ಷಾಚರಣೆ, ವಿಧಾನಮಂಡಲದ ಬೆಳಗಾವಿ ಅಧಿವೇಶನ ನಡೆಸುವ ವಿಷಯದಲ್ಲಿ ಬದಲಾವಣೆ ಕುರಿತಂತೆ ಡಬ್ಲ್ಯುಎಚ್‌ಓ ವರದಿ ಆಧಾರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ಮಂಗಳವಾರ ನಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬೊಮ್ಮಾಯಿಯವರು, " ಓಮೈಕ್ರಾನ್ ತಳಿಯು ಕಳವಳಕಾರಿ ರೂಪಾಂತರಿಯಾಗಿದ್ದು,...