ಕಾಗೆ ಹಾರಿಸಿ ತಲೆಮರೆಸಿಕೊಂಡಿದ್ದ, ಉತ್ತರಕುಮಾರ ಡ್ರೋಣ್ ಪ್ರತಾಪ್ ಅಂದರ್ ; ಪೋಲೀಸರ ಅತಿಥಿಯಾದ ಸಾವಿರ ಸುಳ್ಳಿನ ಸರದಾರ – ಕಹಳೆ ನ್ಯೂಸ್
ಬೆಂಗಳೂರು: ಎಫ್‍ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ....