ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ – ಕಹಳೆ ನ್ಯೂಸ್
ನವದೆಹಲಿ: ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸುವುದಕ್ಕೆ ವಿರೋಧ ಕೇಳಿಬರುತ್ತಿರುವುದರ ಮಧ್ಯೆ ಶಿಕ್ಷಣ ತಜ್ಞರು ಈ ಪತ್ರ ಬರೆದಿದ್ದು, ತಮ್ಮ ರಾಜಕೀಯ ಹಿತಾಸಕ್ತಿಯಿಂದ ಕೆಲವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂದಿನ...