ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ ಕುಂದಾಪುರ – ಕಹಳೆ ನ್ಯೂಸ್
ಬಿಗ್ ಬಾಸ್ ನೀಡಿದ್ದ ಜೋಡಿ ಟಾಸ್ಕ್ ಮುಗಿದ ಬಳಿಕ ಬಾತ್ ರೂಮ್ ಏರಿಯಾದಲ್ಲಿ ಒಬ್ಬರೇ ಇದ್ದಾಗ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೂಡಲೇ ಚೈತ್ರಾ ನೆರವಿಗಾಗಿ ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ಅವರನ್ನು ಕಳಿಸಿದ್ದಾರೆ. ಅವರಿಬ್ಬರು ಓಡಿ ಬಂದು ನೋಡಿದಾಗ ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ...