ಮಾದಕ ವಸ್ತು ಮುಕ್ತ ಸಮಾಜಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ- ಶ್ರೀ ಆಂಜನೇಯ ರೆಡ್ಡಿ–ಕಹಳೆ ನ್ಯೂಸ್
ಪುತ್ತೂರು : ಸಂತ ಫಿಲೋಮಿನಾ ಪ. ಪೂ ಕಾಲೇಜು ವತಿಯಿಂದ ಮಾದಕ ವಸ್ತು ವಿರೋಧಿ ಜಾಗೃತಿ ಉಪನ್ಯಾಸವು ನ.26 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀ ಆಂಜನೇಯ ರೆಡ್ಡಿ ಮಾತನಾಡಿ "ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಅರಿವು ಮೂಡಬೇಕಿದೆ. ಯುವಜನತೆಯಲ್ಲಿ ಮಾದಕ ವ್ಯಸನ...